ADVERTISEMENT

ರಾಜಸ್ಥಾನದಲ್ಲಿ 4.2 ತೀವ್ರತೆಯ ಭೂಕಂಪ; ದೆಹಲಿಯಲ್ಲೂ ನಡುಕ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 18 ಡಿಸೆಂಬರ್ 2020, 0:55 IST
Last Updated 18 ಡಿಸೆಂಬರ್ 2020, 0:55 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ರಾಜಸ್ಥಾನದ ಅಲ್ವಾರ್ ಜಿಲ್ಲೆಯಲ್ಲಿ ಗುರುವಾರ ರಾತ್ರಿ 4.2 ತೀವ್ರತೆಯ ಭೂಕಂಪನ ಸಂಭವಿಸಿದ್ದು, ಇದರ ಪರಿಣಾಮವೆಂಬಂತೆ ದೆಹಲಿ-ಎನ್‌ಸಿಆರ್‌ನಲ್ಲೂ ನಡುಕ ಉಂಟಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ತಿಳಿಸಿದೆ.

ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆ 4.2ರಷ್ಟು ದಾಖಲಾಗಿದೆ. ಭೂಕಂಪದ ಕೇಂದ್ರ ಬಿಂದು ರಾಜಸ್ಥಾನದ ಅಲ್ವಾರ್ ಎಂಬುದನ್ನು ಎನ್‌ಸಿಎಸ್ ಖಚಿತಪಡಿಸಿದೆ.

ರಾತ್ರಿ 11.46ಕ್ಕೆ ಸರಿಯಾಗಿ ಐದು ಕಿಲೋಮೀಟರ್ ಆಳದಲ್ಲಿ 4.2 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ವಿವರಣೆ ನೀಡಿದೆ.

ADVERTISEMENT

ಭೂಕಂಪದ ತೀವ್ರತೆಯಿಂದಾಗಿ ದೆಹಲಿ-ಎನ್‌ಸಿಆರ್ ಹಲವು ಭಾಗಗಳಲ್ಲಿ ನಡುಕ ಅನುಭವವಾಗಿದೆ. ಆದರೆ ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂಬುದು ತಿಳಿದು ಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಗಳು ಇನ್ನಷ್ಟೇ ಲಭ್ಯವಾಗಬೇಕಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.