ಭಾರತ, ಚೀನಾ
ನವದೆಹಲಿ: ಕಳೆದ ನಾಲ್ಕು ವರ್ಷಗಳಿಂದ ಲಡಾಖ್‌ನ ಪೂರ್ವದಲ್ಲಿನ ವಾಸ್ತವ ನಿಯಂತ್ರಣ ರೇಖೆ (ಎಲ್‌ಎಸಿ) ಉದ್ದಕ್ಕೂ ಉದ್ಭವಿಸಿರುವ ಸಂಘರ್ಷ ಶಮನ ಮಾಡುವ ಸಂಬಂಧ ಚೀನಾ ಮತ್ತು ಭಾರತ ಬುಧವಾರ ರಾಜತಾಂತ್ರಿಕ ಮಟ್ಟದ ಮಾತುಕತೆ ನಡೆಸಿದವು.
‘ಗಡಿಯಲ್ಲಿ ಶಾಂತಿ ಮತ್ತು ಸಹಜ ಸ್ಥಿತಿ ಮರುಸ್ಥಾಪನೆಗಾಗಿ ರಚನಾತ್ಮಕ ಮಾತುಕತೆ ನಡೆಸಲಾಯಿತು’ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿದೆ.
ಲಾವೋಸ್‌ನಲ್ಲಿ ಇತ್ತೀಚೆಗೆ ವಿದೇಶಾಂಗ ಸಚಿವ ಎಸ್.ಜೈಶಂಕರ್ ಹಾಗೂ ಚೀನಾ ಸಚಿವ ವಾಂಗ್ ಯಿ ಅವರು ದ್ವಿಪಕ್ಷೀಯ ಸಭೆ ನಡೆಸಿದ್ದರು. ಇದರ ಬೆನ್ನಲ್ಲೇ, ದೆಹಲಿಯಲ್ಲಿ ಮತ್ತೊಂದು ಸುತ್ತಿನ ಮಾತುಕತೆ ನಡೆಯಿತು ಎಂದು ಸಚಿವಾಲಯ ತಿಳಿಸಿದೆ.
ಉಭಯ ದೇಶಗಳ ನಡುವಿನ ಈ ಮಾತುಕತೆ ಫಲಪ್ರದವಾಗಿರುವ ಕುರಿತು ಹೆಚ್ಚಿನ ವಿವರಗಳು ಬಹಿರಂಗಗೊಂಡಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.