ADVERTISEMENT

ಗಡಿ ಸಂಘರ್ಷ: ಯೋಧರ ಸಂಪೂರ್ಣ ಹಿಂತೆಗೆತಕ್ಕೆ ಪಟ್ಟು

ನಾಳೆ ಮಿಲಿಟರಿ ಅಧಿಕಾರಿಗಳ ಮಟ್ಟದ ಮಾತುಕತೆ

ಪಿಟಿಐ
Published 11 ಅಕ್ಟೋಬರ್ 2020, 16:45 IST
Last Updated 11 ಅಕ್ಟೋಬರ್ 2020, 16:45 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ಗಡಿಯಲ್ಲಿ ಉದ್ಭವಿಸಿರುವ ಸಂಘರ್ಷ ಪರಿಸ್ಥಿತಿ ಶಮನವಾಗಬೇಕಾದರೆ ಪೂರ್ವ ಲಡಾಖ್‌ನ ಆಯಕಟ್ಟಿನ ಸ್ಥಳಗಳಿಂದ ಯೋಧರನ್ನು ಹಿಂದಕ್ಕೆ ಕರೆಸುವ ಪ್ರಕ್ರಿಯೆ ಶೀಘ್ರ ಮತ್ತು ಸಂಪೂರ್ಣವಾಗಿ ನೆರವೇರಬೇಕು ಎಂದು ಭಾರತ ಪುನರುಚ್ಚರಿಸಿದೆ.

ಸಂಘರ್ಷ ಪರಿಸ್ಥಿತಿಯನ್ನು ಶಮನಗೊಳಿಸುವ ಸಂಬಂಧ ಭಾರತ ಮತ್ತು ಚೀನಾದ ಭದ್ರತಾ ಪಡೆಗಳ ಉನ್ನತ ಅಧಿಕಾರಿಗಳ ನಡುವೆ ಸೋಮವಾರ (ಅ. 12) ನಡೆಯಲಿರುವ 7ನೇ ಸುತ್ತಿನ ಮಾತುಕತೆ ವೇಳೆ ಭಾರತ ತನ್ನ ಈ ನಿಲುವನ್ನು ಸ್ಪಷ್ಟಪಡಿಸಲಿದೆ ಎಂದು ಮೂಲಗಳು ಹೇಳಿವೆ.

ವಾಸ್ತವ ನಿಯಂತ್ರಣ ರೇಖೆ (ಎಲ್‌ಎಸಿ) ಬಳಿ ಚುಶೂಲ್‌ನಲ್ಲಿ ಮಾತುಕತೆ ನಡೆಯಲಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.