ADVERTISEMENT

ಪ್ರಚಾರ ನಿಷೇಧ ಪ್ರಜಾಪ್ರಭುತ್ವ ವಿರೋಧಿ, ಅಸಾಂವಿಧಾನಿಕ ಎಂದ ಮಮತಾ: ನಾಳೆ ಧರಣಿ

​ಪ್ರಜಾವಾಣಿ ವಾರ್ತೆ
Published 12 ಏಪ್ರಿಲ್ 2021, 15:54 IST
Last Updated 12 ಏಪ್ರಿಲ್ 2021, 15:54 IST
ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ   

ಕೋಲ್ಕತ್ತ: ತಮ್ಮ ಚುನಾವಣಾ ಪ್ರಚಾರಕ್ಕೆ ನಿಷೇಧ ಹೇರಿರುವುದು ಪ್ರಜಾಪ್ರಭುತ್ವ ವಿರೋಧಿ ಮತ್ತು ಅಸಾಂವಿಧಾನಿಕ ಕ್ರಮ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಆಯೋಗದ ಕ್ರಮದ ವಿರುದ್ಧ ಪ್ರತಿಭಟನಾರ್ಥವಾಗಿ ಮಂಗಳವಾರ ಮಧ್ಯಾಹ್ನ 12 ಗಂಟೆಗೆ ಕೋಲ್ಕತ್ತದ ಗಾಂಧಿ ಪ್ರತಿಮೆ ಎದುರು ಧರಣಿ ನಡೆಸುವುದಾಗಿ ಅವರು ಹೇಳಿದ್ದಾರೆ.

ಚುನಾವಣಾ ಆಯೋಗವು ಬಿಜೆಪಿಯ ಕೈಗೊಂಬೆಯಂತೆ ವರ್ತಿಸುತ್ತಿದೆ. ಇದು ಪ್ರಜಾಪ್ರಭುತ್ವದ ಕರಾಳ ದಿನ ಎಂದು ಟಿಎಂಸಿ ರಾಜ್ಯಸಭಾ ಸದಸ್ಯ ಡೆರೆಕ್‌‌ ಓʼಬ್ರಿಯಾನ್ ಹೇಳಿದ್ದಾರೆ.

ಧರ್ಮಕ್ಕೆ ಸಂಬಂಧಿಸಿದಂತೆ ಪ್ರಚೋದನಕಾರಿ ಮತ್ತು ಭದ್ರತಾಪಡೆಗಳ ವಿರುದ್ಧ ಮಮತಾ ಬ್ಯಾನರ್ಜಿ ಅವರು ನೀಡಿರುವ ಹೇಳಿಕೆಗಳು ರಾಜ್ಯದಾದ್ಯಂತ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರುತ್ತದೆ. ಹೀಗಾಗಿ ಅವರ ಪ್ರಚಾರದ ಮೇಲೆ ಏಪ್ರಿಲ್ 12ರ ರಾತ್ರಿ 8 ಗಂಟೆಯಿಂದ ಏಪ್ರಿಲ್ 13ರ ರಾತ್ರಿ 8 ಗಂಟೆಯ ವರೆಗೆ ನಿಷೇಧ ವಿಧಿಸಲಾಗಿದೆ ಎಂದು ಚುನಾವಣಾ ಆಯೋಗ ಸೋಮವಾರ ರಾತ್ರಿ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.