ನವದೆಹಲಿ: ಮತದಾರರಿಗೆ ಗುರುತಿನ ಚೀಟಿಗಳನ್ನು (ವೋಟರ್ ಐಡಿ–ಇಪಿಐಸಿ) 15 ದಿನಗಳೊಳಗಾಗಿ ತಲುಪಿಸುವ ವ್ಯವಸ್ಥೆ ಮಾಡುವುದಾಗಿ ಚುನಾವಣಾ ಆಯೋಗವು ಬುಧವಾರ ತಿಳಿಸಿದೆ.
ಇದುವರೆಗೆ ಅರ್ಜಿ ಸಲ್ಲಿಸಿದ ಒಂದು ತಿಂಗಳಿಗೂ ಹೆಚ್ಚು ಅವಧಿಯ ನಂತರ ಮತದಾರರ ಗುರುತಿನ ಚೀಟಿ ತಲುಪುತ್ತಿತ್ತು. ಹೊಸ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದ್ದು, ಇನ್ನು ಮುಂದೆ ವಿಳಂಬ ತಪ್ಪಲಿದೆ ಎಂದು ಹೇಳಿದೆ.
ಇಪಿಐಸಿಗೆ ಅರ್ಜಿ ಸಲ್ಲಿಸಿದ ನಂತರದ ಎಲ್ಲ ಹಂತಗಳನ್ನು ಆನ್‌ಲೈನ್‌ನಲ್ಲಿ ಪರಿಶೀಲಿಸಬಹುದಾಗಿದೆ ಎಂದೂ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.