ADVERTISEMENT

ಮದ್ರಾಸ್‌ ಹೈಕೋರ್ಟ್ ತರಾಟೆ: ‘ಸುಪ್ರೀಂ’ನಲ್ಲಿ ಅರ್ಜಿ

​ಪ್ರಜಾವಾಣಿ ವಾರ್ತೆ
Published 1 ಮೇ 2021, 21:31 IST
Last Updated 1 ಮೇ 2021, 21:31 IST
   

ನವದೆಹಲಿ: ‘ದೇಶದಲ್ಲಿ ಕೋವಿಡ್‌–19 ಪ್ರಕರಣಗಳು ಹೆಚ್ಚಲು ಚುನಾವಣಾ ಆಯೋಗವೇ ಹೊಣೆ’ ಎಂದು ಮದ್ರಾಸ್‌ ಹೈಕೋರ್ಟ್‌ ಕಟುವಾಗಿ ಟೀಕಿಸಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ.

ಚುನಾವಣಾ ಆಯೋಗ ಸಲ್ಲಿಸಿರುವ ಈ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಡಿ.ವೈ. ಚಂದ್ರಚೂಡ್‌ ಮತ್ತು ಎಂ.ಆರ್‌. ಶಾ ಅವರನ್ನೊಳಗೊಂಡ ಪೀಠವು ಸೋಮವಾರ ವಿಚಾರಣೆ ನಡೆಸಲಿದೆ.

ಹೈಕೋರ್ಟ್‌ನ ಅಭಿಪ್ರಾಯಗಳು ಅನಗತ್ಯ ಮತ್ತು ಅವಮಾನಕಾರಿಯಾಗಿವೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ADVERTISEMENT

‘ಚುನಾವಣಾ ಆಯೋಗವು ಅತ್ಯಂತ ಬೇಜವಾಬ್ದಾರಿ ಸಂಸ್ಥೆಯಾಗಿದೆ ಮತ್ತು ಕೋವಿಡ್‌ ಸೋಂಕು ಹಬ್ಬಲು ಸಹ ಜವಾಬ್ದಾರಿಯಾಗಿದೆ’ ಎಂದು ಏಪ್ರಿಲ್‌ 26ರಂದು ನಡೆದ ವಿಚಾರಣೆ ಸಂದರ್ಭದಲ್ಲಿ ಮದ್ರಾಸ್‌ ಹೈಕೋರ್ಟ್‌ ಹೇಳಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.