ADVERTISEMENT

ನವಜೋತ್ ಸಿಂಗ್ ಸಿಧುಗೆ ಚುನಾವಣಾ ಆಯೋಗ ನೋಟಿಸ್

​ಪ್ರಜಾವಾಣಿ ವಾರ್ತೆ
Published 21 ಏಪ್ರಿಲ್ 2019, 7:57 IST
Last Updated 21 ಏಪ್ರಿಲ್ 2019, 7:57 IST
   

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರನ್ನು ಪರಾಭವಗೊಳಿಸಲು ಮುಸ್ಲಿಂ ಮತಗಳು ವಿಭಜನೆಯಾಗದಂತೆ ನೋಡಿಕೊಳ್ಳಬೇಕು ಎಂದು ಹೇಳಿದ್ದ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಅವರಿಗೆ ಚುನಾವಣಾ ಆಯೋಗ ನೋಟಿಸ್ ನೀಡಿದೆ.

ಚುನಾವಣಾ ಪ್ರಚಾರದಲ್ಲಿ ಧರ್ಮ ಮತ್ತು ರಾಜಕೀಯವನ್ನು ಬೆರೆಸಬೇಡಿ ಎಂದು ಸುಪ್ರೀಂಕೋರ್ಟ್ ರಾಜಕಾರಣಿಗಳಿಗೆ ಹೇಳಿತ್ತು.

ಮುಸ್ಲಿಂ ಮತಗಳನ್ನು ಒಗ್ಗೂಡಿಸಬೇಕು ಎಂದು ಕರೆ ನೀಡುವ ಮೂಲಕ ಚುನಾವಣಾ ನೀತಿ ಸಂಹಿತೆಯ್ನು ಸಿಧು ಉಲ್ಲಂಘಿಸಿದ್ದಾರೆ. ನೋಟಿಸ್‍ಗೆ 24 ಗಂಟೆಗಳೊಳಗೆ ಪ್ರತಿಕ್ರಿಯಿಸದೇ ಇದ್ದರೆ ಸಿಧು ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಚುನಾವಣಾ ಆಯೋಗ ಹೇಳಿದೆ. ಬಿಹಾರದ ಕತಿಹಾರ್‍‌ನಲ್ಲಿ ನಡೆಸಿದ ಭಾಷಣದ ವಿರುದ್ಧವೂ ಸಿಧು ವಿರುದ್ಧ ಎಫ್‍ಐಆರ್ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.