ADVERTISEMENT

ಚುನಾವಣಾಧಿಕಾರಿಗಳ ವಿರುದ್ಧ ಕೊಲೆ ಪ್ರಕರಣ ದಾಖಲಿಸಬಹುದು: ಮದ್ರಾಸ್ ಹೈಕೋರ್ಟ್ ಕಿಡಿ

​ಪ್ರಜಾವಾಣಿ ವಾರ್ತೆ
Published 26 ಏಪ್ರಿಲ್ 2021, 9:28 IST
Last Updated 26 ಏಪ್ರಿಲ್ 2021, 9:28 IST
ಮದ್ರಾಸ್ ಹೈಕೋರ್ಟ್ (ಐಸ್ಟಾಕ್‌ ಚಿತ್ರ)
ಮದ್ರಾಸ್ ಹೈಕೋರ್ಟ್ (ಐಸ್ಟಾಕ್‌ ಚಿತ್ರ)   

ಚೆನ್ನೈ: ಕೋವಿಡ್–19 ಸಾಂಕ್ರಾಮಿಕದ ಸಂದರ್ಭದಲ್ಲಿ ರಾಜಕೀಯ ರ್‍ಯಾಲಿಗಳಿಗೆ ಅನುಮತಿ ನೀಡಿರುವುದಕ್ಕೆ ಚುನಾವಣಾ ಆಯೋಗದ ವಿರುದ್ಧ ಮದ್ರಾಸ್ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

‘ಬಹುಶಃ ಚುನಾವಣಾ ಆಯೋಗದ ಅಧಿಕಾರಿಗಳ ವಿರುದ್ಧ ಕೊಲೆ ಪ್ರಕರಣ ದಾಖಲಿಸಬಹುದು’ ಎಂದು ಮುಖ್ಯ ನ್ಯಾಯಮೂರ್ತಿ ಸಂಜೀವ್ ಬ್ಯಾನರ್ಜಿ ಹೇಳಿದ್ದಾರೆ.

‘ದೇಶದಲ್ಲಿ ಕೋವಿಡ್ ಎರಡನೇ ಅಲೆ ಹರಡಲು ನಿಮ್ಮ ಸಂಸ್ಥೆಯೇ ಏಕೈಕ ಜವಾಬ್ದಾರಿಯಾಗಿದೆ’ ಎಂದು ಭಾರತೀಯ ಚುನಾವಣಾ ಆಯೋಗವನ್ನು ಉದ್ದೇಶಿಸಿ ಬ್ಯಾನರ್ಜಿ ಹೇಳಿದ್ದಾರೆ.

ಮತ ಎಣಿಕೆ ತಡೆಯುವ ಎಚ್ಚರಿಕೆ

ಕೋವಿಡ್ -19 ಮಾರ್ಗಸೂಚಿ ಪಾಲನೆಯಾಗುವುದನ್ನು ಖಚಿತಪಡಿಸಿಕೊಳ್ಳಲು ಸರಿಯಾದ ಯೋಜನೆ ರೂಪಿಸದಿದ್ದರೆ ಮೇ 2ರಂದು ಮತ ಎಣಿಕೆ ನಡೆಸುವುದಕ್ಕೆ ತಡೆ ನೀಡುವುದಾಗಿ ಹೈಕೋರ್ಟ್ ಎಚ್ಚರಿಕೆ ನೀಡಿದೆ.

‘ಚುನಾವಣಾ ರ್‍ಯಾಲಿಗಳು ನಡೆದಾಗ ನೀವು ಅನ್ಯ ಗ್ರಹದಲ್ಲಿದ್ದಿರಾ?’ ಎಂದು ಮುಖ್ಯ ನ್ಯಾಯಮೂರ್ತಿಗಳು ಚುನಾವಣಾ ಆಯೋಗವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.