ADVERTISEMENT

ಎಸ್‌ಐಆರ್ | ತಮಿಳುನಾಡು, ಪ.ಬಂಗಾಳ ಆರೋಪ ರಾಜಕೀಯ ಪ್ರೇರಿತ: ಕೇಂದ್ರ ಚುನಾವಣಾ ಆಯೋಗ

ಪಿಟಿಐ
Published 2 ಡಿಸೆಂಬರ್ 2025, 0:04 IST
Last Updated 2 ಡಿಸೆಂಬರ್ 2025, 0:04 IST
---
---   

ನವದೆಹಲಿ: ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯನ್ನು(ಎಸ್‌ಐಆರ್) ಕೇಂದ್ರ ಚುನಾವಣಾ ಆಯೋಗ, ಸುಪ್ರೀಂ ಕೋರ್ಟ್‌ನಲ್ಲಿ ಬಲವಾಗಿ ಸಮರ್ಥನೆ ಮಾಡಿಕೊಂಡಿದೆ.

ಯೋಗ್ಯ ಮತದಾರರನ್ನು ಪಟ್ಟಿಯಿಂದ ಸಾಮೂಹಿಕವಾಗಿ ಕಿತ್ತುಹಾಕಲಾಗುತ್ತಿದೆ ಎನ್ನುವ ಆರೋಪಗಳು ಅತ್ಯಂತ ಉತ್ಪ್ರೇಕ್ಷಿತ, ಊಹಾತ್ಮಕ ಮತ್ತು ರಾಜಕೀಯ ಪ್ರೇರಿತ ಎಂದು ಪ್ರಮಾಣಪತ್ರದಲ್ಲಿ ಸ್ಪಷ್ಟಪಡಿಸಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್‌, ನ್ಯಾಯಮೂರ್ತಿ ಜಾಯ್‌ಮಾಲ್ಯ ಬಾಗ್ಚಿ ಅವರು ಇದ್ದ ಪೀಠವು ಡಿಎಂಕೆ, ಸಿಪಿಎಂ, ಪಶ್ಚಿಮ ಬಂಗಾಳದ ಕಾಂಗ್ರೆಸ್ ಘಟಕ, ತೃಣಮೂಲ ಕಾಂಗ್ರೆಸ್‌ ನಾಯಕರು ಸಲ್ಲಿಸಿದ್ದ ಅರ್ಜಿ ಸಂಬಂಧ ನವೆಂಬರ್‌ 11ರಂದು ಚುನಾವಣಾ ಆಯೋಗದ ಪ್ರತಿಕ್ರಿಯೆ ಕೇಳಿತ್ತು. 

ADVERTISEMENT

ನ್ಯಾಯಾಲಯದಲ್ಲಿ ಪ್ರತ್ಯೇಕ ಪ್ರಮಾಣಪತ್ರ ಸಲ್ಲಿಸಿರುವ ಆಯೋಗದ ಕಾರ್ಯದರ್ಶಿ ಪವನ್‌ ದಿವಾನ್‌, ಎಸ್‌ಐಆರ್ ವಿರುದ್ಧ ಸಲ್ಲಿಸಿರುವ ಅರ್ಜಿಗಳನ್ನು ವಜಾಗೊಳಿಸಲು ಮನವಿ ಮಾಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.