ನಾಗ್ಪುರ: ‘ಮಹಾರಾಷ್ಟ್ರ ಚುನಾವಣೆಗೂ ಮುನ್ನ ಇದನ್ನು ನಾವು ಪರಿಶೀಲಿಸಬೇಕಿತ್ತು’ ಎಂದು ರಾಹುಲ್ ಗಾಂಧಿ ಅವರ ‘ಮತಗಳ್ಳತನ’ ಆರೋಪದ ಬಗ್ಗೆ ಎನ್‌ಸಿಪಿ(ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಪ್ರತಿಕ್ರಿಯಿಸಿದ್ದಾರೆ.
ಇಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರ ಚುನಾವಣೆಗೂ ಮುನ್ನ ಈ ಬಗ್ಗೆ ಮಹಾ ವಿಕಾಸ್ ಆಘಾಡಿ ಹೆಚ್ಚು ಎಚ್ಚರಿಕೆ ವಹಿಸಬೇಕಿತ್ತು ಎಂದು ಒಪ್ಪಿಕೊಂಡಿದ್ದಾರೆ.
ಮತಗಳ್ಳತನವಾಗಿರುವ ಬಗ್ಗೆ ಸಂಶೋಧನೆ ನಡೆಸಿ ಎಲ್ಲಾ ದಾಖಲೆಗಳನ್ನಿಟ್ಟುಕೊಂಡು ರಾಹುಲ್ ಗಾಂಧಿ ಮಾತನಾಡಿದ್ದಾರೆ. ಈ ವಿಷಯದ ಬಗ್ಗೆ ಪರಿಶೀಲಿಸುವುದು ಚುನಾವಣಾ ಆಯೋಗಕ್ಕೆ ಬಿಟ್ಟದ್ದು ಎಂದೂ ಹೇಳಿದ್ದಾರೆ.
ಮುಂದುವರಿದು, ‘ಸೆಪ್ಟೆಂಬರ್ 9 ರಂದು ನಡೆಯಲಿರುವ ಉಪ ರಾಷ್ಟ್ರಪತಿ ಚುನಾವಣೆಯ ಬಗ್ಗೆ ‘ಇಂಡಿಯಾ’ ಮೈತ್ರಿಕೂಟ ಇನ್ನೂ ತನ್ನ ನಿಲುವನ್ನು ನಿರ್ಧರಿಸಿಲ್ಲ’ ಎಂದು ಹೇಳಿದ್ದಾರೆ.
ಇದೇ ವೇಳೆ, ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಜೊತೆ ಕೈಜೋಡಿಸುವ ಊಹಾಪೋಹಗಳನ್ನು ಪವಾರ್ ತಳ್ಳಿಹಾಕಿದ್ದಾರೆ. ‘ನಾವು ಎಂದಿಗೂ ಬಿಜೆಪಿ ನೇತೃತ್ವದ ಮೈತ್ರಿಕೂಟದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ’ ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.