ADVERTISEMENT

ಕಿರು,ಸಣ್ಣ ಮತ್ತು ಮಧ್ಯಮ ಕೈಗಾರಿಕೆ, ಉದ್ಯಮಗಳಿಗೆ ಆರ್ಥಿಕ ಪ್ಯಾಕೇಜ್ ಸಹಕಾರಿ:ಮೋದಿ

ಏಜೆನ್ಸೀಸ್
Published 13 ಮೇ 2020, 16:47 IST
Last Updated 13 ಮೇ 2020, 16:47 IST
ನರೇಂದ್ರ ಮೋದಿ
ನರೇಂದ್ರ ಮೋದಿ   

ನವದೆಹಲಿ: ಕೊರೊನಾವೈರಸ್ ಲಾಕ್‌ಡೌನ್‌ನಿಂದಾಗಿ ಕುಸಿದಿರುವ ಆರ್ಥಿಕತೆಗೆ ಉತ್ತೇಜನ ನೀಡಲು ಕೇಂದ್ರ ಸರ್ಕಾರ ಬುಧವಾರ ಹಲವಾರು ಕ್ರಮಗಳನ್ನು ಕೈಗೊಂಡಿದೆ.

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಾಡಿದ ಘೋಷಣೆಗಳಿಂದ ವಿಶೇಷವಾಗಿ ಕಿರು, ಸಣ್ಣ ಮತ್ತು ಮಧ್ಯಮ ಕೈಗಾರಿಕೆ (ಎಂಎಸ್‌ಎಂಇ) ಮತ್ತು ಉದ್ಯಮಗಳು ಹಲವಾರು ಕಾಲಗಳಿಂದ ಅನುಭವಿಸುತ್ತಿದ ಸಮಸ್ಯೆಗಳಿಗೆ ಪರಿಹಾರ ಲಭಿಸಲಿದೆ. ಲಿಕ್ವಿಡಿಟಿಯನ್ನು ವರ್ಧಿಸಲು, ವಾಣಿಜ್ಯೋದ್ಯಮಿಗಳ ಸಬಲೀಕರಣ ಮತ್ತು ಸ್ಪರ್ಧಾತ್ಮಕ ಸ್ಫೂರ್ತಿಯನ್ನು ಬಲಪಡಿಸಲು ಇದು ನೆರವಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟಿಸಿದ್ದಾರೆ.

ಕೋವಿಡ್-19ನಿಂದಾಗಿ ಕುಂದಿರುವ ಆರ್ಥಿಕತೆಯನ್ನು ಉತ್ತೇಜಿಸಲು ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಎಂಎಸ್ಎಂಇ ಮತ್ತು ಉದ್ಯಮಗಳಿಗೆ ಮೂಲಾಧಾರ ರಹಿತ ₹3ಲಕ್ಷ ಕೋಟಿ ಸಾಲ ಘೋಷಣೆ ಮಾಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.