ADVERTISEMENT

ಸತ್ಯೇಂದ್ರ ಜೈನ್ ವಿರುದ್ಧದ ಪ್ರಕರಣ: ಇಬ್ಬರು ಉದ್ಯಮಿಗಳ ಬಂಧನ

ಇ.ಡಿ ವಿಚಾರಣೆ ವೇಳೆ ಹಾರಿಕೆಯ ಉತ್ತರ

ಪಿಟಿಐ
Published 1 ಜುಲೈ 2022, 12:35 IST
Last Updated 1 ಜುಲೈ 2022, 12:35 IST
ಸತ್ಯೇಂದ್ರ ಜೈನ್‌
ಸತ್ಯೇಂದ್ರ ಜೈನ್‌   

ನವದೆಹಲಿ: ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರ ಮೇಲಿರುವಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯ (ಇ.ಡಿ) ಇಬ್ಬರು ಉದ್ಯಮಿಗಳನ್ನು ಬಂಧಿಸಿದೆ. ವೈಭವ್‌ ಜೈನ್‌ ಮತ್ತು ಅನುಷ್ಕಾ ಜೈನ್‌ ಬಂಧಿತರು ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಪ್ರಕರಣ ಸಂಬಂಧ ಇ.ಡಿ ವಿಚಾರಣೆ ವೇಳೆ ಹಾರಿಕೆಯ ಉತ್ತರ ನೀಡಿದ ಹಿನ್ನೆಲೆಯಲ್ಲಿಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್‌ಎ) ಕ್ರಿಮಿನಲ್ ಸೆಕ್ಷನ್‌ಗಳ ಅಡಿಯಲ್ಲಿ ಉದ್ಯಮಿಗಳಿಬ್ಬರನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.

57 ವರ್ಷದ ಸತ್ಯೇಂದ್ರ ಜೈನ್ ಅವರನ್ನು ಇ.ಡಿ ಮೇ 30ರಂದು ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯ ಅಡಿಯಲ್ಲಿ ಬಂಧಿಸಿತ್ತು. ಜೈನ್‌ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.