ADVERTISEMENT

ವಿವಿಐಪಿ ಹೆಲಿಕಾಪ್ಟರ್‌ ಖರೀದಿ ಹಗರಣ: ಇ.ಡಿಯಿಂದ ಉದ್ಯಮಿ ಅನೂಪ್‌ಕುಮಾರ್‌ ಬಂಧನ

ಪಿಟಿಐ
Published 30 ಜನವರಿ 2021, 14:38 IST
Last Updated 30 ಜನವರಿ 2021, 14:38 IST
ಜಾರಿ ನಿರ್ದೇಶನಾಲಯ
ಜಾರಿ ನಿರ್ದೇಶನಾಲಯ   

ನವದೆಹಲಿ: ವಿವಿಐಪಿ ಹೆಲಿಕಾಪ್ಟರ್‌ ಖರೀದಿ ಹಗರಣಕ್ಕೆ ಸಂಬಂಧಿಸಿದಂತೆ ₹ 3,600 ಕೋಟಿ ಅಕ್ರಮ ಹಣ ವರ್ಗಾವಣೆ ಆರೋಪದಡಿ ಜಾರಿ ನಿರ್ದೇಶನಾಲಯವು (ಇ.ಡಿ) ಉದ್ಯಮಿ ಅನೂಪ್‌ಕುಮಾರ್‌ ಗುಪ್ತಾ ಅವರನ್ನು ಬಂಧಿಸಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ಅನೂಪ್‌ಕುಮಾರ್‌ ಅವರು ಇಂಡಿಯಾ ಗೇಟ್‌’ ಬ್ರ್ಯಾಂಡ್‌ನ ಬಾಸಮತಿ ಅಕ್ಕಿ ಮಾರಾಟ ಮಾಡುವ ಕೆಆರ್‌ಬಿಎಲ್‌ ಲಿ. ಕಂಪನಿಯ ನಿರ್ದೇಶಕರಾಗಿದ್ದಾರೆ. ‘ಗುಪ್ತಾ ಅವರನ್ನು ಇಲ್ಲಿ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಅವರನ್ನು ಐದು ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಗಸ್ಟಾವೆಸ್ಟ್‌ಲ್ಯಾಂಡ್‌ ಕಂಪನಿಯಿಂದ ವಿವಿಐಪಿ ಹೆಲಿಕಾಪ್ಟರ್‌ಗಳ ಖರೀದಿ ಹಗರಣಕ್ಕೆ ಸಂಬಂಧಿಸಿ ಗುಪ್ತಾ ಅವರನ್ನು ಈಗಾಗಲೇ ಬಂಧಿಸಲಾಗಿದೆ.

ADVERTISEMENT

‘ಈಗ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಅವರ ವಿರುದ್ಧ ಹೊಸದಾಗಿ ಸಾಕ್ಷ್ಯಗಳು ಸಿಕ್ಕಿರುವ ಕಾರಣ ಅವರನ್ನು ಕಸ್ಟಡಿಗೆ ಪಡೆದು ವಿಚಾರಣೆಗೆ ಒಳಪಡಿಸುವುದು ಅಗತ್ಯವಾಗಿತ್ತು’ ಎಂದು ಅಧಿಕಾರಿಗಳು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.