ADVERTISEMENT

ಹಣ ಅಕ್ರಮ ವರ್ಗಾವಣೆ: ಟಿಎಂಸಿ ಪಕ್ಷದ ಮಾಜಿ ಸಂಸದ ಕೆ.ಡಿ. ಸಿಂಗ್ ಬಂಧನ

ಪಿಟಿಐ
Published 13 ಜನವರಿ 2021, 9:01 IST
Last Updated 13 ಜನವರಿ 2021, 9:01 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್‌ ಪಕ್ಷದ ಮಾಜಿ ಸಂಸದಕೆ.ಡಿ. ಸಿಂಗ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿರುವುದಾಗಿ ಬುಧವಾರ ಅಧಿಕೃತ ಮೂಲಗಳು ತಿಳಿಸಿವೆ.

ಹಣಅಕ್ರಮ ವರ್ಗಾವಣೆ ನಿಯಂತ್ರಣ ಕಾಯ್ದೆ(ಪಿಎಂಎಲ್‌ಎ) ಅಡಿಯಲ್ಲಿ ಸಿಂಗ್ ಅವರನ್ನು ಬಂಧಿಸಿರುವುದಾಗಿ ಮೂಲಗಳು ತಿಳಿಸಿವೆ. ಬಂಧಿತ ಸಿಂಗ್ ಅವರು ಸ್ವಲ್ಪ ಸಮಯದಿಂದ ಟಿಎಂಸಿ ಪಕ್ಷದ ಯಾವುದೇ ಚಟುವಟಿಕೆಗಳಲ್ಲಿ ಭಾಗವಹಿಸುತ್ತಿರಲಿಲ್ಲ ಎಂದು ತಿಳಿದುಬಂದಿದೆ.

ಹಣ ಅಕ್ರಮ ವರ್ಗಾವಣೆಯಎರಡು ಪ್ರಕರಣಗಳಿಗೆ ಸಂಬಂಧಿಸಿದಂತೆ ಕೇಂದ್ರ ತನಿಖಾ ಸಂಸ್ಥೆಯವರು ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಸಿಂಗ್ ಮತ್ತು ಅವರೊಂದಿಗೆ ಸಂಪರ್ಕ ಹೊಂದಿದವರನ್ನು ವಿಚಾರಣೆಗೆ ಒಳಪಡಿಸಿದ್ದರು. ಇದೇ ಎರಡು ಪ್ರಕರಣಗಳ ಭಾಗವಾಗಿ ಜಾರಿ ನಿರ್ದೇಶನಾಲಯ ತನಿಖೆ ಕೈಗೊಂಡಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.