ADVERTISEMENT

ಗೋವು ಕಳ್ಳಸಾಗಣೆ ದಂಧೆ: ಪ್ರಮುಖ ಆರೋಪಿ ಬಂಧಿಸಿದ ಇ.ಡಿ

​ಪ್ರಜಾವಾಣಿ ವಾರ್ತೆ
Published 19 ಫೆಬ್ರುವರಿ 2022, 11:37 IST
Last Updated 19 ಫೆಬ್ರುವರಿ 2022, 11:37 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ (ಪಿಟಿಐ): ಗಡಿಯಾಚೆಗೆ ನಡೆಸುತ್ತಿದ್ದ ಗೋವು ಕಳ್ಳಸಾಗಣೆಯ ಬಹುಕೋಟಿ ದಂಧೆಯ ಪ್ರಮುಖ ರೂವಾರಿ ಮಹಮದ್‌ ಇನಾಮುಲ್ ಹಕ್‌ ಎಂಬಾತನನ್ನು ಜಾರಿ ನಿರ್ದೇಶನಾಲಯ (ಇ.ಡಿ) ಬಂಧಿಸಿದೆ.

ಪಶ್ಚಿಮ ಬಂಗಾಳದ ಭಾರತ-ಬಾಂಗ್ಲಾ ಗಡಿಯಲ್ಲಿ ನಡೆಯುವ ಅಕ್ರಮ ವ್ಯಾಪಾರದ ಹಣ ವರ್ಗಾವಣೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಹಕ್‌ನನ್ನು ಇ.ಡಿ ಬಂಧಿಸಿದೆ.

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್‌ಎ) ಸೆಕ್ಷನ್‌ಗಳ ಅಡಿಯಲ್ಲಿ ಹಕ್‌ನನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಆರೋಪಿಯನ್ನು ಇಲ್ಲಿನ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ಆರೋಪಿಯನ್ನು ಹೆಚ್ಚಿನ ತನಿಖೆಗೆ ವಶಕ್ಕೆ ನೀಡುವಂತೆ ನ್ಯಾಯಾಲಯವನ್ನು ಕೋರಲಾಗುವುದು ಎಂದು ಇ.ಡಿ ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಇದೇ ಪ್ರಕರಣದ ಸ್ವತಂತ್ರ ತನಿಖೆಯ ಭಾಗವಾಗಿ ಸಿಬಿಐ 2020ರ ನವೆಂಬರ್‌ನಲ್ಲಿ ಹಕ್‌ನನ್ನು ಬಂಧಿಸಿತ್ತು. ಕಳೆದ ತಿಂಗಳು ಸುಪ್ರೀಂ ಕೋರ್ಟ್ ಆತನಿಗೆ ಜಾಮೀನು ನೀಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.