ADVERTISEMENT

ರಸಗೊಬ್ಬರ ಹಗರಣ: ಇ.ಡಿಯಿಂದ ಆರ್‌ಜೆಡಿ ರಾಜ್ಯಸಭಾ ಸದಸ್ಯನ ಬಂಧನ

ಪಿಟಿಐ
Published 3 ಜೂನ್ 2021, 6:20 IST
Last Updated 3 ಜೂನ್ 2021, 6:20 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ರಸಗೊಬ್ಬರ ಹಗರಣವೊಂದಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ಲೇವಾದೇವಿ ಕೃತ್ಯದಲ್ಲಿ ಶಾಮೀಲಾದ ಆರೋಪದ ಮೇರೆಗೆ ಜಾರಿ ನಿರ್ದೇಶನಾಲಯವು (ಇ.ಡಿ) ಆರ್‌ಜೆಡಿ ರಾಜ್ಯಸಭಾ ಸದಸ್ಯ ಅಮರೇಂದ್ರ ಧರಿ ಸಿಂಗ್‌ ಅವರನ್ನು ಬಂಧಿಸಿದೆ.

ಹಣ ಲೇವಾದೇವಿ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಸಂಸದ ಸಿಂಗ್ ಮತ್ತು ಉದ್ಯಮಿಯೊಬ್ಬರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ಇಫ್ಕೊ ಮತ್ತು ಇಂಡಿಯಾ ಪೊಟ್ಯಾಷ್‌ ಲಿಮಿಟೆಡ್‌ ಕಂಪನಿಗಳಿಗೆ ಸಂಬಂಧಿಸಿದ ಹಗರಣ ಇದಾಗಿದ್ದು, ಸಿಬಿಐ ಕಳೆದ ತಿಂಗಳು ಭ್ರಷ್ಟಾಚಾರ ಪ್ರಕರಣ ದಾಖಲಿಸಿತ್ತು. ಸಂಸದ ಸಿಂಗ್ ಅವರು ಈ ಪ್ರಕರಣದಲ್ಲಿ ಶಾಮೀಲಾಗಿರುವ ಜ್ಯೋತಿ ಟ್ರೇಡಿಂಗ್‌ ಕಾರ್ಪೊರೇಷನ್‌ ಎಂಬ ಕಂಪನಿಯ ಹಿರಿಯ ಉಪಾಧ್ಯಕ್ಷರಾಗಿದ್ದಾರೆ ಎಂದು ಹೇಳಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.