ADVERTISEMENT

SDPI ರಾಷ್ಟ್ರೀಯ ಅಧ್ಯಕ್ಷ ಫೈಝಿ ಇ.ಡಿ ವಶಕ್ಕೆ

ಪಿಟಿಐ
Published 4 ಮಾರ್ಚ್ 2025, 5:12 IST
Last Updated 4 ಮಾರ್ಚ್ 2025, 5:12 IST
<div class="paragraphs"><p>ಎಂ. ಕೆ. ಫೈಝಿ</p></div>

ಎಂ. ಕೆ. ಫೈಝಿ

   

ಚಿತ್ರ ಕೃಪೆ: ಫೇಸ್‌ಬುಕ್‌

ನವದೆಹಲಿ: ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸೋಷಿಯಲಿಸ್ಟ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ(ಎಸ್‌ಡಿಪಿಐ) ರಾಷ್ಟ್ರೀಯ ಅಧ್ಯಕ್ಷ ಎಂ. ಕೆ. ಫೈಝಿ ಅವರನ್ನು ಜಾರಿ ನಿರ್ದೇಶನಾಲಯ(ಇ.ಡಿ) ವಶಕ್ಕೆ ಪಡೆದಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ADVERTISEMENT

ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ(ಪಿಎಂಎಲ್‌ಎ) ಅಡಿ ಸೋಮವಾರ ರಾತ್ರಿ ದೆಹಲಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಫೈಝಿ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದೆ.

2009ರಲ್ಲಿ ಎಸ್‌ಡಿಪಿಐ ಸ್ಥಾಪನೆಗೊಂಡಿತ್ತು. ನಿಷೇಧಿತ ಪಿಎಫ್‌ಐ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದೆ ಎಂಬ ಆರೋಪವು ಈ ಸಂಘಟನೆ ಮೇಲಿದೆ. ಆದರೆ, ಈ ಆರೋಪವನ್ನು ಎಸ್‌ಡಿಪಿಐ ನಿರಾಕರಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.