ADVERTISEMENT

ಶಿಕ್ಷಕರ ನೇಮಕಾತಿ ಹಗರಣ: ಪಶ್ಚಿಮ ಬಂಗಾಳದ ಟಿಎಂಸಿ ಶಾಸಕ ಮಾಣಿಕ್ ಭಟ್ಟಾಚಾರ್ಯ ಬಂಧನ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 11 ಅಕ್ಟೋಬರ್ 2022, 13:51 IST
Last Updated 11 ಅಕ್ಟೋಬರ್ 2022, 13:51 IST
ಮಾಣಿಕ್ ಭಟ್ಟಾಚಾರ್ಯ
ಮಾಣಿಕ್ ಭಟ್ಟಾಚಾರ್ಯ   

ಕೋಲ್ಕತ್ತ:ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು (ಇ.ಡಿ) ಮಂಗಳವಾರ ತೃಣಮೂಲ ಕಾಂಗ್ರೆಸ್ ಪಕ್ಷದ (ಟಿಎಂಸಿ) ಶಾಸಕ ಮಾಣಿಕ್ ಭಟ್ಟಾಚಾರ್ಯ ಅವರನ್ನು ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸೋಮವಾರ ರಾತ್ರಿಯಿಡೀ ಇ.ಡಿ ಮಾಣಿಕ್ ಅವರನ್ನು ವಿಚಾರಣೆ ನಡೆಸಿತ್ತು ಎನ್ನಲಾಗಿದೆ.

‘ಸೋಮವಾರ ಮಧ್ನಾಹ್ನದಿಂದಲೇ ಮಾಣಿಕ್ ಅವರ ವಿಚಾರಣೆ ಆರಂಭಿಸಲಾಗಿತ್ತು. ಆದರೆ, ತನಿಖೆಗೆ ಸಹಕರಿಸದ ಕಾರಣಕ್ಕಾಗಿ ಅವರನ್ನು ಬಂಧಿಸಲಾಗಿದೆ. ಅಷ್ಟೇ ಅಲ್ಲ, ಅವರು ತನಿಖಾಧಿಕಾರಿಗಳ ದಿಕ್ಕು ತಪ್ಪಿಸುವ ಕೆಲಸವನ್ನೂ ಮಾಡಿದ್ದಾರೆ’ ಎಂದೂ ಇ.ಡಿ. ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ADVERTISEMENT

ಸಿಬಿಐ ಕೂಡಾ ಈ ಹಗರಣದ ತನಿಖೆ ಕೈಗೊಂಡಿದ್ದು, ಈ ಹಿಂದೆ ಸಿಬಿಐ ಭಟ್ಟಾಚಾರ್ಯ ಅವರನ್ನು ಬಂಧಿಸದಂತೆ ಸುಪ್ರೀಂ ಕೋರ್ಟ್ ರಕ್ಷಣೆ ನೀಡಿತ್ತು.

ಶಾಲಾ ಸೇವಾ ಆಯೋಗದ (ಎಸ್‌ಎಸ್‌ಸಿ) ನೇಮಕಾತಿ ಹಗರಣದಲ್ಲಿ ಜಾರಿ ನಿರ್ದೇಶನಾಲಯವು ಜುಲೈ ತಿಂಗಳಲ್ಲಿ ಪಶ್ಚಿಮ ಬಂಗಾಳದ ಮಾಜಿ ಶಿಕ್ಷಣ ಸಚಿವ ಪಾರ್ಥ ಚಟರ್ಜಿ ಅವರನ್ನು ಬಂಧಿಸಿತ್ತು.

ತನಿಖೆಗೆ ಸಹಕರಿಸದ ಆರೋಪದ ಹಿನ್ನೆಲೆಯಲ್ಲಿ ಭಟ್ಟಾಚಾರ್ಯ ಅವರನ್ನು ಬಂಧಿಸಲಾಗಿದೆ ಎಂದು ಇ.ಡಿ ಅಧಿಕಾರಿಗಳು ತಿಳಿಸಿದ್ದಾರೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಣಿಕ್ ಭಟ್ಟಾಚಾರ್ಯ ಅವರನ್ನು ಜುಲೈನಲ್ಲಿ ಇ.ಡಿ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದರು.

ಭಟ್ಟಾಚಾರ್ಯ ನಾಡಿಯಾ ಜಿಲ್ಲೆಯ ಪಾಲಾಶಿಪರ ಕ್ಷೇತ್ರದ ಶಾಸಕರಾಗಿದ್ದಾರೆ.

ಇದೇ ಪ್ರಕರಣಕ್ಕೆ ಸಂಬಂಧಿಸಿಪಶ್ಚಿಮ ಬಂಗಾಳದ ಮಾಜಿ ಶಿಕ್ಷಣ ಸಚಿವ ಪಾರ್ಥ ಚಟರ್ಜಿ ಅವರನ್ನು ಇ.ಡಿ ಬಂಧಿಸಿತ್ತು.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.