ADVERTISEMENT

ಶಿಕ್ಷಕರ ನೇಮಕಾತಿ ಹಗರಣ: ಟಿಎಂಸಿ ಮುಖಂಡ ಕುಂತಲ್‌ ಘೋಷ್ ಬಂಧನ

​ಪ್ರಜಾವಾಣಿ ವಾರ್ತೆ
Published 21 ಜನವರಿ 2023, 10:38 IST
Last Updated 21 ಜನವರಿ 2023, 10:38 IST
.
.   

ಕೋಲ್ಕತ್ತ (ಪಿಟಿಐ): ಶಿಕ್ಷಕರ ನೇಮಕಾತಿ ಹಗರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ತೃಣಮೂಲ ಕಾಂಗ್ರೆಸ್‌ನ ಯುವ ಮುಖಂಡ ಕುಂತಲ್ ಘೋಷ್ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ) ಶನಿವಾರ ಬಂಧಿಸಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಚಿನಾರ್ ಪಾರ್ಕ್ ಅಪಾರ್ಟ್‌ಮೆಂಟ್‌ ಸಮುಚ್ಛಯದಲ್ಲಿ ರಾತ್ರಿಯಿಡೀ ಶೋಧ ಕಾರ್ಯಾಚರಣೆ ನಡೆಸಿದ ನಂತರ ಘೋಷ್ ಅವರನ್ನು ಶನಿವಾರ ಬೆಳಿಗ್ಗೆ ಇ.ಡಿ ಅಧಿಕಾರಿಗಳು ವಶಕ್ಕೆ ಪಡೆದರು ಮತ್ತು ನಂತರ ಅವರನ್ನು ಬಂಧಿಸಲಾಯಿತು ಎಂದು ಅವರು ಹೇಳಿದರು.

ಅಪಾರ್ಟ್‌ಮೆಂಟ್‌ನ ಎರಡು ಸಮುಚ್ಛಯಗಳಲ್ಲಿ ಹಲವು ದಾಖಲೆಗಳು, ಡೈರಿಯನ್ನು ವಶಪಡಿಸಿಕೊಳ್ಳಲಾಗಿದೆ. ‘ನೇಮಕಾತಿ ಹಗರಣದ ತನಿಖೆ ನಡೆಸುತ್ತಿರುವ ಅಧಿಕಾರಿಗಳಿಗೆ ಸಹಕರಿಸದ ಕಾರಣ ಕುಂತಲ್ ಘೋಷ್ ಅವರನ್ನು ಬಂಧಿಸಿದ್ದು ನ್ಯಾಯಾಲಯದಲ್ಲಿ ಹಾಜರುಪಡಿಸಲಾಗುವುದು’ ಎಂದು ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ADVERTISEMENT

ಏತನ್ಮಧ್ಯೆ ಇದೇ ಪ್ರಕರಣದ ವಿಚಾರಣೆಗಾಗಿ ಸಿಬಿಐ ಅಧಿಕಾರಿಗಳು ಘೋಷ್ ಅವರಿಗೆ ಸಮನ್ಸ್ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.