ADVERTISEMENT

ಕಾರ್ತಿ ಚಿದಂಬರಂಗೆ ಸೇರಿದ ₹11.04 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

ಕೊಡಗಿನಲ್ಲಿರುವ ಸ್ಥಿರಾಸ್ತಿ ಸೇರಿ ಒಟ್ಟು 4 ಸ್ಥಳಗಳಲ್ಲಿರುವ ಆಸ್ತಿ ಮುಟ್ಟುಗೋಲು

​ಪ್ರಜಾವಾಣಿ ವಾರ್ತೆ
Published 18 ಏಪ್ರಿಲ್ 2023, 15:53 IST
Last Updated 18 ಏಪ್ರಿಲ್ 2023, 15:53 IST
   

ನವದೆಹಲಿ: ಕಾಂಗ್ರೆಸ್‌ ಸಂಸದ ಕಾರ್ತಿ ಚಿದಂಬರಂಗೆ ಸೇರಿದ ₹ 11.04 ಕೋಟಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿದೆ. ಐಎನ್‌ಎಕ್ಸ್‌ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಹೀಗೆ ಮಾಡಲಾಗಿದೆ ಎಂದು ಜಾರಿ ನಿರ್ದೇಶನಾಲಯವು ಹೇಳಿದೆ.

ಕರ್ನಾಟಕದ ಕೊಡಗಿನಲ್ಲಿರುವ ಒಂದು ಸ್ಥಿರಾಸ್ತಿ ಸೇರಿ ಒಟ್ಟು 4 ಆಸ್ತಿಗಳನ್ನು ಮುಟ್ಟುಗೋಲು ಹಾಕಲಾಗಿದೆ.

ಐಎನ್‌ಎಕ್ಸ್‌ ಮಿಡಿಯಾ ಹಗರಣ ಸಂಬಂಧ ಕಾರ್ತಿ ಚಿದಂಬರಂ ಸಿಬಿಐ ಹಾಗೂ ಇಡಿ ತನಿಖೆಯನ್ನು ಎದುರಿಸುತ್ತಿದ್ದಾರೆ. ಇದೇ ಪ್ರಕರಣದಲ್ಲಿ ಬಂಧಿತರಾಗಿದ್ದ ಅವರು, ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.

ADVERTISEMENT

ತಮಿಳುನಾಡಿನ ಶಿವಗಂಗಾ ಲೋಕಸಭಾ ಕ್ಷೇತ್ರವನ್ನು ಕಾರ್ತಿ ಪ್ರತಿನಿಧಿಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.