
ನವದೆಹಲಿ: ಹಣ ಅಕ್ರಮ ವರ್ಗಾವಣೆ ಪ್ರಕರಣ ತನಿಖೆಯ ಭಾಗವಾಗಿ ರಿಲಯನ್ಸ್ ಸಮೂಹದ ಅಧ್ಯಕ್ಷ ಅನಿಲ್ ಅಂಬಾನಿ ಅವರ ಕಂಪನಿಗಳು ಮತ್ತು ಸಂಬಂಧಿತ ಸಂಸ್ಥೆಗಳಿಗೆ ಸೇರಿದ ₹1,120 ಕೋಟಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯವು (ಇ.ಡಿ) ಜಪ್ತಿ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮುಂಬೈನ ಬಲ್ಲಾರ್ಡ್ ಎಸ್ಟೇಟ್‌ನಲ್ಲಿರುವ ರಿಲಯನ್ಸ್ ಸೆಂಟರ್, ನಿಶ್ಚಿತ ಠೇವಣಿಗಳು, ರಿಲಯನ್ಸ್ ಅನಿಲ್ ಅಂಬಾನಿ ಗ್ರೂಪ್‌ಗೆ ಸೇರಿದ ಅಘೋಷಿತ ಹೂಡಿಕೆ ಸೇರಿದಂತೆ 18 ಸ್ವತ್ತುಗಳನ್ನು ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಇ.ಡಿ ತಾತ್ಕಾಲಿಕ ಮುಟ್ಟುಗೋಲು ಹಾಕಿಕೊಂಡಿದೆ.
ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ (ಆರ್ ಕಾಂ), ರಿಲಯನ್ಸ್ ಕಮರ್ಷಿಯಲ್ ಫೈನಾನ್ಸ್ ಲಿಮಿಟೆಡ್ ಮತ್ತು ರಿಲಯನ್ಸ್ ಹೋಂ ಫೈನಾನ್ಸ್ ಲಿಮಿಟೆಡ್‌ಗೆ ಸಂಬಂಧಿಸಿದ ಬ್ಯಾಂಕ್ ವಂಚನೆ ಪ್ರಕರಣದಲ್ಲಿ ಇ.ಡಿ ₹8,997ಕೋಟಿಗೂ ಹೆಚ್ಚು ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿತ್ತು.
ರಿಲಯನ್ಸ್ ಗ್ರೂಪ್ ವಿರುದ್ಧದ ಪ್ರಕರಣದಲ್ಲಿ ಇದುವರೆಗೆ ಒಟ್ಟು ₹10,117 ಕೋಟಿ ಮೌಲ್ಯದ ಆಸ್ತಿಯನ್ನು ಇ.ಡಿ ಮುಟ್ಟುಗೋಲು ಹಾಕಿಕೊಂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.