ADVERTISEMENT

ಅಗ್ರಿ ಗೋಲ್ಡ್‌ ಗ್ರೂಪ್‌ನ ₹4,109 ಕೋಟಿ ಮೌಲ್ಯದ ಆಸ್ತಿ ಜಪ್ತಿ ಮಾಡಿದ ಇ.ಡಿ

ಪಿಟಿಐ
Published 25 ಡಿಸೆಂಬರ್ 2020, 1:39 IST
Last Updated 25 ಡಿಸೆಂಬರ್ 2020, 1:39 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಗ್ರಿ ಗೋಲ್ಡ್‌ ಗ್ರೂಪ್‌ಗೆ ಸೇರಿದ, ವಿವಿಧ ರಾಜ್ಯಗಳಲ್ಲಿರುವ ಒಟ್ಟು ₹ 4,109 ಕೋಟಿ ಮೌಲ್ಯದ ಆಸ್ತಿಗಳನ್ನು ಜಾರಿ ನಿರ್ದೇಶನಾಲಯ (ಇ.ಡಿ) ಗುರುವಾರ ಜಪ್ತಿ ಮಾಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಪನಿಯ ಮೂವರು ಪ್ರವರ್ತಕರನ್ನು ಈಚೆಗೆ ಇ.ಡಿ ಅಧಿಕಾರಿಗಳು ಬಂಧಿಸಿದ್ದರು.

ಆಂಧ್ರಪ್ರದೇಶದಲ್ಲಿ 48 ಎಕರೆ ಪ್ರದೇಶದಲ್ಲಿ ಅಭಿವೃದ್ಧಿಪಡಿಸಲಾಗಿರುವ ಅರ್ಕಾ ಲೀಜರ್ ಆ್ಯಂಡ್‌ ಎಂಟರ್‌ಟೇನ್ಮೆಂಟ್‌ ಪ್ರೈ. ಲಿ. (ಹೈಲ್ಯಾಂಡ್‌ ಅಮ್ಯೂಸ್‌ಮೆಂಟ್‌ ಪಾರ್ಕ್‌) ಸೇರಿದಂತೆ ಕರ್ನಾಟಕ, ಒಡಿಶಾ, ತಮಿಳುನಾಡು ಹಾಗೂ ತೆಲಂಗಾಣ ರಾಜ್ಯಗಳಲ್ಲಿ ಕಂಪನಿ ಹೊಂದಿರುವ ಆಸ್ತಿಗಳನ್ನು ಜಪ್ತಿ ಮಾಡಲಾಗಿದೆ ಎಂದು ಇ.ಡಿ ಪ್ರಕಟಣೆಯಲ್ಲಿ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.