ADVERTISEMENT

ಲಂಚ ಪ್ರಕರಣ: ಇ.ಡಿ ಉಪನಿರ್ದೇಶಕನನ್ನು ಬಂಧಿಸಿದ ಸಿಬಿಐ

​ಪ್ರಜಾವಾಣಿ ವಾರ್ತೆ
Published 30 ಮೇ 2025, 6:46 IST
Last Updated 30 ಮೇ 2025, 6:46 IST
<div class="paragraphs"><p>ಬಂಧನ (ಸಾಂದರ್ಭಿಕ ಚಿತ್ರ)</p></div>

ಬಂಧನ (ಸಾಂದರ್ಭಿಕ ಚಿತ್ರ)

   

ನವದೆಹಲಿ: ಲಂಚ ಪ್ರಕರಣದಲ್ಲಿ ಒಡಿಶಾದ ಜಾರಿ ನಿರ್ದೇಶನಾಲಯದ (ಇ.ಡಿ) ಉಪನಿರ್ದೇಶಕ ಚಿಂತನ್ ರಘುವಂಶಿಯನ್ನು  ಸಿಬಿಐ ಶುಕ್ರವಾರ ಬಂಧಿಸಿದೆ.

ಚಿಂತನ್ ರಘುವಂಶಿ ಅವರು ಭುವನೇಶ್ವರ ಮೂಲದ ಗಣಿಗಾರಿಕೆ ಉದ್ಯಮಿಯಿಂದ ₹ 20 ಲಕ್ಷ ಲಂಚ ಪಡೆಯುವ ಸಂದರ್ಭದಲ್ಲಿ ಬಂಧಿಸಲಾಯಿತು ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಖಚಿತ ಮಾಹಿತಿ ಆಧರಿಸಿ ಈ ಕಾರ್ಯಾಚರಣೆ ನಡೆಸಲಾಯಿತು ಎಂದು ಅವರು ಹೇಳಿದ್ದಾರೆ.

ಚಿಂತನ್ ರಘುವಂಶಿ 2013ನೇ ಬ್ಯಾಚ್‌ನ ಐಆರ್‌ಎಸ್ ಅಧಿಕಾರಿಯಾಗಿದ್ದಾರೆ. ಘಟನೆ ಸಂಬಂಧ ಸಿಬಿಐ ಅಧಿಕಾರಿಗಳು ಚಿಂತನ್ ರಘುವಂಶಿಯನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.