ADVERTISEMENT

ಪ್ರಾಸಿಕ್ಯೂಟರ್‌ಗಳಿಗೆ ಇ.ಡಿ. ನಿರ್ದೇಶನ ಸಲ್ಲ: ಕೋರ್ಟ್

ಪಿಟಿಐ
Published 12 ಡಿಸೆಂಬರ್ 2024, 16:06 IST
Last Updated 12 ಡಿಸೆಂಬರ್ 2024, 16:06 IST
supreme-court-
supreme-court-   

ನವದೆಹಲಿ: ಜಾರಿ ನಿರ್ದೇಶನಾಲಯ (ಇ.ಡಿ) ಮತ್ತು ಅದರ ನಿರ್ದೇಶಕರು ಹಣದ ಅಕ್ರಮ ವರ್ಗಾವಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಸೂಚನೆಗಳನ್ನು ತಮ್ಮ ಪಬ್ಲಿಕ್ ಪ್ರಾಸಿಕ್ಯೂಟರ್‌ಗಳಿಗೆ ನೀಡಬಹುದು. ಆದರೆ ಅವರು ಕೋರ್ಟ್‌ನಲ್ಲಿ ಹೇಗೆ ನಡೆದುಕೊಳ್ಳಬೇಕು ಎಂಬ ಬಗ್ಗೆ ನಿರ್ದೇಶನ ನೀಡುವಂತಿಲ್ಲ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

ಸುಪ್ರೀಂ ಕೋರ್ಟ್‌ ನೀಡಿರುವ ಈ ಸ್ಪಷ್ಟನೆಯು, ನ್ಯಾಯಾಲಯದ ಅಧಿಕಾರಿಗಳಾಗಿ ಪಬ್ಲಿಕ್ ಪ್ರಾಸಿಕ್ಯೂಟರ್‌ಗಳು ಹೊಂದಿರುವ ಸ್ವಾತಂತ್ರ್ಯವನ್ನು ಒತ್ತಿಹೇಳಿದೆ. ಅಲ್ಲದೆ, ತನಿಖಾ ಸಂಸ್ಥೆಗಳು ನ್ಯಾಯಾಲಯದ ಪ್ರಕ್ರಿಯೆಗಳಲ್ಲಿ ಪ್ರಭಾವ ಬೀರುವುದನ್ನು ಮಿತಿಗೊಳಿಸುತ್ತದೆ.

ದೆಹಲಿ ವಕ್ಫ್ ಮಂಡಳಿಯ ಹಣದ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದ್ದ ಜೀಶನ್ ಹೈದರ್ ಮತ್ತು ದೌದ್ ನಸೀರ್ ಅವರಿಗೆ ಬುಧವಾರ ಜಾಮೀನು ನೀಡುವ ಸಂದರ್ಭದಲ್ಲಿ ನ್ಯಾಯಮೂರ್ತಿಗಳಾದ ಅಭಯ್ ಎಸ್. ಓಕ ಮತ್ತು ಆಗಸ್ಟೀನ್ ಜಾರ್ಜ್‌ ಮಸೀಹ‌್ ಅವರು ಇರುವ ವಿಭಾಗೀಯ ಪೀಠವು ಈ ಮಾತು ಹೇಳಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.