ADVERTISEMENT

ಬಘೆಲ್ ವಿರುದ್ಧ ಇ.ಡಿ ಆರೋಪ | ಸಿಎಂ ಪ್ರತಿಷ್ಠೆಗೆ ಕಳಂಕ ತರುವ ‌ಸಂಚು: ಕಾಂಗ್ರೆಸ್

ಪಿಟಿಐ
Published 4 ನವೆಂಬರ್ 2023, 9:57 IST
Last Updated 4 ನವೆಂಬರ್ 2023, 9:57 IST
<div class="paragraphs"><p>ಭೂಪೇಶ್ ಬಘೆಲ್</p></div>

ಭೂಪೇಶ್ ಬಘೆಲ್

   

ನವದೆಹಲಿ: ಛತ್ತೀಸಗಢ ಮುಖ್ಯಮಂತ್ರಿ ಭೂಪೇಶ್‌ ಬಘೆಲ್ ಅವರ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ) ಮಾಡಿರುವ ಆರೋಪಗಳು, ಅವರ ವರ್ಚಸ್ಸಿಗೆ ಮಸಿ ಬಳಿಯಲು ಬಿಜೆಪಿ ರೂಪಿಸಿರುವ ಷಡ್ಯಂತ್ರ ಎಂದು ಕಾಂಗ್ರೆಸ್‌ ಆರೋಪಿಸಿದೆ.

ಈ ಆರೋಪಗಳಿಗೆ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದ ಜನತೆ ತಕ್ಕ ಉತ್ತರ ನೀಡಲಿದ್ದಾರೆ. ಈ ಪ್ರಕರಣದಲ್ಲಿ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘನೆ ಮಾಡಿದ್ದು, ಈ ವಿಷಯವನ್ನು ಚುನಾವಣಾ ಆಯೋಗದ ಬಳಿ ತೆಗೆದುಕೊಂಡು ಹೋಗುವುದಾಗಿ ಕಾಂಗ್ರೆಸ್‌ ತಿಳಿಸಿದೆ.

ADVERTISEMENT

ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್‌, ‘ರಾಜಸ್ಥಾನ ಮತ್ತು ಛತ್ತೀಸಗಢ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯ ಸೋಲು ಖಚಿತವಾಗಿರುವುದರಿಂದ, ಇ.ಡಿ ಮತ್ತು ಸಿಬಿಐಗಳಂತಹ ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ಬಿಜೆಪಿ ಪಕ್ಷವು ದುರುಪಯೋಗ ಪಡಿಸಿಕೊಳ್ಳುತ್ತಿದೆ. ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ. ಆದರೆ, ರಾಜಸ್ಥಾನ ಮತ್ತು ಛತ್ತೀಸಗಢದ ಜನರು ಕಾಂಗ್ರೆಸ್‌ ಮೇಲೆ ನಂಬಿಕೆ ಇಟ್ಟಿದ್ದಾರೆ’ ಎಂದು ಹೇಳಿದರು.

ಭೂಪೇಶ್‌ ಬಘೆಲ್ ಅವರ ಪ್ರತಿಷ್ಠೆಗೆ ಮಸಿ ಬಳಿಯಲು ಬಿಜೆಪಿ ಸಂಚು ನಡೆಸುತ್ತಿದೆ. ಮುಂಬರುವ ಚುನಾವಣೆಯಲ್ಲಿ ಜನರು ಬಿಜೆಪಿಗೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಕಾಂಗ್ರೆಸ್‌ ನಾಯಕ ಕೆ.ಸಿ ವೇಣುಗೋಪಾಲ್‌ ವಾಗ್ದಾಳಿ ನಡೆಸಿದ್ದಾರೆ.

ಮುಖ್ಯಮಂತ್ರಿ ಭೂಪೇಶ್ ಬಘೆಲ್ ಅವರಿಗೆ ಮಹದೇವ್‌ ಬೆಟ್ಟಿಂಗ್‌ ಆ್ಯಪ್‌ನ ಪ್ರವರ್ತಕರು ₹ 508 ಕೋಟಿ ಪಾವತಿ ಮಾಡಿದ್ದಾರೆ ಎಂದು ಜಾರಿ ನಿರ್ದೇಶನಾಲಯವು ಆರೋಪಿಸಿದ್ದು, ‘ಕ್ಯಾಶ್‌ ಕೊರಿಯರ್‌’ನ ಹೇಳಿಕೆ ಹಾಗೂ ವಿಧಿವಿಜ್ಞಾನ ಪ್ರಯೋಗಾಲಯದ ವಿಶ್ಲೇಷಣೆಗಳು ಈ ಆರೋಪಗಳಿಗೆ ಪೂರಕವಾಗಿವೆ. ಆದರೆ, ಉಲ್ಲೇಖಿತ ಆರೋಪ ಕುರಿತು ವಿಸ್ತೃತ ತನಿಖೆ ಅಗತ್ಯವಾಗಿದೆ’ ಎಂದು ಇ.ಡಿ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.