ಚೆನ್ನೈ (ಪಿಟಿಐ): ‘ತಮಿಳುನಾಡಿನ ಸಚಿವ ವಿ. ಸೆಂಥಿಲ್ ಬಾಲಾಜಿ ಹಾಗೂ ಇತರರ ವಿರುದ್ಧದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು (ಇ.ಡಿ) ಗುರುವಾರ ಮತ್ತೊಮ್ಮೆ ಶೋಧ ನಡೆಸಿದೆ’ ಎಂದು ಅಧಿಕೃತ ಮೂಲಗಳು ತಿಳಿಸಿವೆ.
‘ಕೆಲವು ಸಂಸ್ಥೆಗಳಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಹಾಗೂ ಕೊಯಮತ್ತೂರು ಮತ್ತು ಕರೂರ್‌ನಲ್ಲಿರುವ ಆಪಾದಿತ ಬೇನಾಮಿದಾರರಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಶೋಧ ನಡೆಸಲಾಗಿದೆ’ ಎಂದು ಹೇಳಿವೆ.
ತಮಿಳುನಾಡಿನ ಸಾರಿಗೆ ಇಲಾಖೆಯಲ್ಲಿ ಉದ್ಯೋಗ ಕೊಡಿಸಲು ಹಣ ಪಡೆದ ಆರೋಪದ ಮೇಲೆ ಸೆಂಥಿಲ್ ಬಾಲಾಜಿ ಅವರನ್ನು ಜೂನ್ 14ರಂದು ಇ.ಡಿ ಬಂಧಿಸಿತ್ತು. ಅವರ ಬಳಿ ಈಗ ಯಾವುದೇ ಖಾತೆ ಇಲ್ಲದಿದ್ದರೂ ಸಚಿವರಾಗಿ ಮುಂದುವರಿದಿದ್ದಾರೆ.
ತಮ್ಮನ್ನು ಬಂಧಿಸಿದ ಕ್ರಮವನ್ನು ಎತ್ತಿಹಿಡಿದ ಮದ್ರಾಸ್ ಹೈಕೋರ್ಟ್ ತೀರ್ಪು ಪ್ರಶ್ನಿಸಿ, ಸೆಂಥಿಲ್ ಅವರು ಜುಲೈ 14ರಂದು ಸುಪ್ರಿಂ ಕೋರ್ಟ್ ಮೊರೆ ಹೋಗಿದ್ದರು. ಈ ಕುರಿತು ಬುಧವಾರ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ತನ್ನ ತೀರ್ಪನ್ನು ಕಾಯ್ದಿರಿಸಿರುವುದಾಗಿ ಪ್ರಕಟಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.