ADVERTISEMENT

ಹಣ ಅಕ್ರಮ ವರ್ಗಾವಣೆ: ವಿವೊ ಕಂಪನಿಗೆ ಸೇರಿದ ಸ್ಥಳಗಳಲ್ಲಿ ಇ.ಡಿ ಶೋಧ

ಪಿಟಿಐ
Published 5 ಜುಲೈ 2022, 12:46 IST
Last Updated 5 ಜುಲೈ 2022, 12:46 IST
ಇ.ಡಿ
ಇ.ಡಿ   

ನವದೆಹಲಿ: ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ, ಸ್ಮಾರ್ಟ್‌ಫೋನ್‌ ತಯಾರಕ ಕಂಪನಿ ಚೀನಾದ ವಿವೊ ಹಾಗೂ ಸಂಬಂಧಪಟ್ಟ ಸಂಸ್ಥೆಗಳಿಗೆ ಸೇರಿದ ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ಮಂಗಳವಾರ ಶೋಧ ನಡೆಸಿದ್ದಾರೆ.

ದೆಹಲಿ, ಉತ್ತರ ಪ್ರದೇಶ, ಮೇಘಾಲಯ, ಮಹಾರಾಷ್ಟ್ರಗಳಲ್ಲಿ ಒಟ್ಟು 44 ಸ್ಥಳಗಳಲ್ಲಿ ಶೋಧ ನಡೆಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ವಿವೊ ಕಂಪನಿಯಲ್ಲಿ ಪಾಲುದಾರರಾಗಿರುವ ಕೆಲ ಚೀನಾ ಪ್ರಜೆಗಳು ತಮ್ಮ ಗುರುತಿಗೆ ಸಂಬಂಧಿಸಿದ ದಾಖಲೆಗಳನ್ನು ತಿರುಚಿದ್ದರು ಎನ್ನಲಾಗಿದೆ. ಇತ್ತೀಚೆಗೆ ಜಮ್ಮು–ಕಾಶ್ಮೀರದಲ್ಲಿನ ವಿತರಕರೊಬ್ಬರ ವಿರುದ್ಧ ದೆಹಲಿ ಪೊಲೀಸರು ಎಫ್‌ಐಆರ್‌ ದಾಖಲಿಸಿ, ತನಿಖೆ ಕೈಗೊಂಡಿದ್ದ ವೇಳೆ ಈ ಸಂಗತಿ ಹೊರಬಿದ್ದಿತ್ತು. ಅದರ ಆಧಾರದಲ್ಲಿಯೇ ಇ.ಡಿ ಅಧಿಕಾರಿಗಳು ಕಂಪನಿ ವಿರುದ್ಧ ಹಣ ಅಕ್ರಮ ವರ್ಗಾವಣೆ ಪ್ರಕರಣ ದಾಖಲಿಸಿ, ಶೋಧ ಕೈಗೊಂಡಿದ್ದಾರೆ ಎನ್ನಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.