ಕೋಲ್ಕತ್ತ: ಮರಳು ಕಳ್ಳಸಾಗಣೆ ದಂಧೆಯಲ್ಲಿ ಭಾಗಿಯಾಗಿದ್ದಾರೆಂದು ಆರೋಪಿಸಲಾದ ವ್ಯಕ್ತಿಗಳು ಮತ್ತು ವ್ಯವಹಾರಗಳನ್ನು ಗುರಿಯಾಗಿಸಿಕೊಂಡು ಜಾರಿ ನಿರ್ದೇಶನಾಲಯವು (ಇ.ಡಿ) ಗುರುವಾರ ಪಶ್ಚಿಮ ಬಂಗಾಳದ ವಿವಿಧ ಸ್ಥಳಗಳಲ್ಲಿ ಏಕಕಾಲಕ್ಕೆ ದಾಳಿಗಳನ್ನು ಪ್ರಾರಂಭಿಸಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಕೋಲ್ಕತ್ತಾದ ಬೆಂಟಿಕ್ ಸ್ಟ್ರೀಟ್ ಪ್ರದೇಶ, ಲಾಲ್‌ಗಢ ಮತ್ತು ಜಾರ್‌ಗ್ರಾಮ್ ಜಿಲ್ಲೆಯ ಗೋಪಿಬಲ್ಲವ್‌ಪುರದ ಕಚೇರಿಗಳ ಮೇಲೆ ಇ.ಡಿ ತಂಡ ದಾಳಿ ನಡೆಸಿದ್ದು, ಪಶ್ಚಿಮ ಬರ್ಧಮಾನ್ ಜಿಲ್ಲೆಯ ಅಸನ್ಸೋಲ್‌ನಲ್ಲಿರುವ ಉದ್ಯಮಿಯೊಬ್ಬರ ನಿವಾಸದಲ್ಲಿ ಮತ್ತೊಂದು ಶೋಧ ಕಾರ್ಯಾಚರಣೆ ನಡೆಸಲಾಗಿದೆ ಎಂದು ಅವರು ಹೇಳಿದ್ದಾರೆ.
‘ಇ.ಡಿ ಕಾರ್ಯಾಚರಣೆಗಳು ಬೆಳಗಿನ ಜಾವದಿಂದಲೇ ಪ್ರಾರಂಭವಾದವು. ಮರಳು ಅಕ್ರಮ ಗಣಿಗಾರಿಕೆ ಕುರಿತ ತನಿಖೆಯ ಭಾಗವಾಗಿ ಈ ದಾಳಿಗಳನ್ನು ನಡೆಸಲಾಗಿದೆ. ವ್ಯವಹಾರ ಮತ್ತು ಹಣಕಾಸಿನ ದಾಖಲೆಗಳು ಹಾಗೂ ದಂಧೆಗೆ ಸಂಬಂಧಿಸಿದ ಆಸ್ತಿಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ’ ಎಂದು ಅವರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.