ನಾಗಪುರ (ಪಿಟಿಐ): ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್‌ಮುಖ್ ವಿರುದ್ಧ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಶುಕ್ರವಾರ ಇಲ್ಲಿನ ಕಾಲೇಜಿನಲ್ಲಿ ಶೋಧ ಕಾರ್ಯ ನಡೆಸಿದರು.
ಪೊಲೀಸರ ಪ್ರಕಾರ, ದೇಶ್‌ಮುಖ್ ಅವರ ನಿಯಂತ್ರಣದಲ್ಲಿ ಇರುವ ನಾಗಪುರ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಸಂಸ್ಥೆಯಲ್ಲಿ ಶೋಧ ಕಾರ್ಯ ನಡೆದಿದೆ. ಹಣ ಅಕ್ರಮ ವರ್ಗಾವಣೆಗೆ ಸಂಬಂಧಿಸಿ ಇ.ಡಿ ಈ ಹಿಂದೆಯೂ ದೇಶ್‌ಮುಖ್ ಅವರ ಆಸ್ತಿಗಳ ಮೇಲೆ ದಾಳಿ ನಡೆಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.