ನಾಗ್ಪುರ: ಮಹಾರಾಷ್ಟ್ರದ ನಾಗ್ಪುರದಲ್ಲಿ ಏಳು ಸ್ಥಳಗಳಲ್ಲಿ ದಾಳಿ ನಡೆಸಿರುವ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶೋಧ ಕಾರ್ಯಾಚರಣೆ ನಡೆಸಿದ್ದಾರೆ ಎಂದು ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.
ಮುಂಬೈನಲ್ಲಿ ದಾಖಲಾದ ಅಪರಾಧ ಕೃತ್ಯಕ್ಕೆ ಸಂಬಂಧಿಸಿದಂತೆ ಚಾರ್ಟರ್ಡ್ ಅಕೌಂಟೆಂಟ್ (ಸಿಎ) ಕಚೇರಿ ಸೇರಿದಂತೆ ಹಲವು ಕಡೆಗಳಲ್ಲಿ ದಾಳಿ ನಡೆಸಲಾಗಿದೆ.
ಈ ಸಂಬಂಧ ಹೆಚ್ಚಿನ ವಿವರಗಳು ತಕ್ಷಣಕ್ಕೆ ಲಭ್ಯವಾಗಿಲ್ಲ.
ಗುರುವಾರ ಬೆಳಿಗ್ಗೆಯಿಂದಲೇ ಆರಂಭವಾಗಿರುವ ಕಾರ್ಯಾಚರಣೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.