ADVERTISEMENT

ನ್ಯಾಷನಲ್‌ ಹೆರಾಲ್ಡ್‌ ಹಗರಣದಲ್ಲಿ ಇ.ಡಿ.ಯಿಂದ ಖರ್ಗೆ ವಿಚಾರಣೆ

ಪಿಟಿಐ
Published 11 ಏಪ್ರಿಲ್ 2022, 8:46 IST
Last Updated 11 ಏಪ್ರಿಲ್ 2022, 8:46 IST
   

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಹಗರಣದ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ) ವಿಚಾರಣೆ ನಡೆಸುತ್ತಿದೆ.

‘ಸೋಮವಾರ ಇ. ಡಿ ವಿಚಾರಣೆಗೆ ಹಾಜರಾಗುವಂತೆ ಕಾಂಗ್ರೆಸ್‌ನ ಹಿರಿಯ ನಾಯಕ, 79 ವರ್ಷದ ಖರ್ಗೆ ಅವರಿಗೆ ಸಮನ್ಸ್ ನೀಡಲಾಗಿತ್ತು’ ಎಂದು ಮೂಲಗಳು ತಿಳಿಸಿವೆ.

‘ತನಿಖೆಯಲ್ಲಿ ಕೆಲವು ವಿಷಯಗಳನ್ನು ಇ.ಡಿ ಅರ್ಥಮಾಡಿಕೊಳ್ಳಬೇಕಿದೆ. ಅದಕ್ಕಾಗಿ ಅವರ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗುವುದು’ ಎಂದು ಸಂಸ್ಥೆಯು ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.