ADVERTISEMENT

ಮಹಾರಾಷ್ಟ್ರ: ಜು. 5ರಂದು ವಿಚಾರಣೆಗೆ ಹಾಜರಾಗಲು ದೇಶಮುಖ್‌ಗೆ ಇ.ಡಿ ಸಮನ್ಸ್‌

ಅಕ್ರಮ ಹಣ ವರ್ಗಾವಣೆ ಪ್ರಕರಣ

ಪಿಟಿಐ
Published 3 ಜುಲೈ 2021, 8:52 IST
Last Updated 3 ಜುಲೈ 2021, 8:52 IST
ಅನಿಲ್‌ ದೇಶಮುಖ್‌
ಅನಿಲ್‌ ದೇಶಮುಖ್‌   

ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 5ರಂದು ವಿಚಾರಣೆಗೆ ಹಾಜರಾಗುವಂತೆ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್‌ ದೇಶಮುಖ್‌ ಅವರಿಗೆ ಸಮನ್ಸ್‌ ನೀಡಲಾಗಿದೆ ಎಂದು ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

‘ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ದೇಶಮುಖ್‌ ಅವರಿಗೆ ನೀಡಿರುವ ಮೂರನೇ ಸಮನ್ಸ್‌ ಇದಾಗಿದೆ. ದಕ್ಷಿಣ ಮುಂಬೈನಲ್ಲಿರುವ ಇ.ಡಿ ಕಚೇರಿಯಲ್ಲಿ ಸೋಮವಾರ ಹೇಳಿಕೆ ದಾಖಲಿಸುವಂತೆ ಅವರಿಗೆ ಸೂಚನೆ ನೀಡಲಾಗಿದೆ’ ಎಂದು ಅಧಿಕಾರಿಗಳು ಹೇಳಿದ್ದಾರೆ.

ಈ ಹಿಂದೆ ಎರಡು ಬಾರಿ ದೇಶ್‌ಮುಖ್‌ ಅವರು ಕೋವಿಡ್‌ ಬಗ್ಗೆ ಆತಂಕ ವ್ಯಕ್ತಪಡಿಸಿ ವಿಚಾರಣೆಯಿಂದ ಹಿಂದೆ ಸರಿದಿದ್ದರು. ಇದರ ಬದಲಿಗೆ ವಿಡಿಯೊ ಕಾನ್ಫರೆನ್ಸ್‌ ಮೂಲಕ ಹೇಳಿಕೆ ದಾಖಲಿಸಲು ಅನುಮತಿ ನೀಡುವಂತೆ ಕೋರಿದ್ದರು.

ADVERTISEMENT

ಬಹುಕೋಟಿ ಲಂಚ ಮತ್ತು ಸುಲಿಗೆ ಆರೋಪಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದ ಬಗ್ಗೆ ವಿಚಾರಣೆಗೆ ಹಾಜರಾಗುವಂತೆ ಅವರಿಗೆ ಸಮನ್ಸ್‌ ಜಾರಿ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.