ADVERTISEMENT

ಹಣ ಅಕ್ರಮ ವರ್ಗಾವಣೆ: ಜಾರ್ಖಂಡ್‌ ಸಿಎಂ ಸೊರೇನ್‌ಗೆ ಇ.ಡಿ ಸಮನ್ಸ್‌

ಪಿಟಿಐ
Published 9 ನವೆಂಬರ್ 2022, 15:49 IST
Last Updated 9 ನವೆಂಬರ್ 2022, 15:49 IST
ಹೇಮಂತ್‌ ಸೊರೇನ್‌
ಹೇಮಂತ್‌ ಸೊರೇನ್‌   

ರಾಂಚಿ (ಪಿಟಿಐ): ಜಾರ್ಖಂಡ್‌ನಲ್ಲಿ ನಡೆದಿದೆ ಎನ್ನಲಾಗಿರುವ ಅಕ್ರಮ ಗಣಿಗಾರಿಕೆ ಸಂಬಂಧ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯವು (ಇ.ಡಿ) ಹಣ ಅಕ್ರಮ ವರ್ಗಾವಣೆ ವಿಚಾರವಾಗಿ ಮುಖ್ಯಮಂತ್ರಿ ಹೇಮಂತ್‌ ಸೊರೇನ್‌ ಅವರಿಗೆ ಹೊಸದಾಗಿ ಸಮನ್ಸ್‌ ಜಾರಿಮಾಡಿದೆ.

‘ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿ ಹೇಳಿಕೆ ದಾಖಲಿಸ ಬೇಕಿರುವುದರಿಂದ ಇದೇ 17ರಂದು ರಾಂಚಿಯಲ್ಲಿ ತನಿಖಾಧಿಕಾರಿಗಳ ಎದುರು ಹಾಜರಾಗುವಂತೆ ಸೊರೇನ್‌ ಅವರಿಗೆ ಸೂಚಿಸಲಾಗಿದೆ’ ಎಂದು ಅಧಿಕೃತ ಮೂಲಗಳು ಬುಧವಾರ ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT