ADVERTISEMENT

ಹಣ ಅಕ್ರಮ ವರ್ಗಾವಣೆ: ನ್ಯಾಷನಲ್ ಕಾನ್ಫರೆನ್ಸ್‌ನ ಫಾರೂಕ್ ಅಬ್ದುಲ್ಲಾಗೆ ED ನೋಟಿಸ್

ಪಿಟಿಐ
Published 12 ಫೆಬ್ರುವರಿ 2024, 14:49 IST
Last Updated 12 ಫೆಬ್ರುವರಿ 2024, 14:49 IST
<div class="paragraphs"><p>ಫಾರೂಕ್ ಅಬ್ದುಲ್ಲಾ</p></div>

ಫಾರೂಕ್ ಅಬ್ದುಲ್ಲಾ

   

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಕ್ರಿಕೆಟ್ ಸಂಸ್ಥೆ (JKCA)ಯಲ್ಲಿ ನಡೆದಿದೆ ಎನ್ನಲಾದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಷನಲ್ ಕಾನ್ಫರೆನ್ಸ್‌ನ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಅವರಿಗೆ ಜಾರಿ ನಿರ್ದೇಶನಾಲಯ (ED) ನೋಟಿಸ್ ಜಾರಿ ಮಾಡಿದೆ. 

ಶ್ರೀನಗರದಲ್ಲಿರುವ ಜಾರಿ ನಿರ್ದೇಶನಾಲಯದ ಕಚೇರಿ ಎದುರು ಮಂಗಳವಾರ ಹಾಜರಾಗುವಂತೆ ಸೂಚಿಸಲಾಗಿದೆ.

ADVERTISEMENT

ಜ. 11ರಂದು ಹಾಜರಾಗುವಂತೆ 86 ವರ್ಷದ ಅಬ್ದುಲ್ಲಾ ಅವರಿಗೆ ED ಈ ಮೊದಲು ಸೂಚಿಸಿತ್ತು. ಆದರೆ ಅವರು ಹಾಜರಾಗಿರಲಿಲ್ಲ. ಈ ಬಾರಿಯೂ ಅವರು ಹಾಜರಾಗುವುದು ಬಹುತೇಕ ಅನುಮಾನ ಎಂದೆನ್ನಲಾಗಿದೆ.

2018ರ ಈ ಪ್ರಕರಣ ಕುರಿತು ಸಿಬಿಐ ಮೊದಲು ಆರೋಪ ಪಟ್ಟಿ ಸಲ್ಲಿಸಿತು. ಇದನ್ನು ಆಧರಿಸಿ ಜಾರಿ ನಿರ್ದೇಶನಾಲಯ ತನಿಖೆ ಕೈಗೊಂಡಿದೆ.

ಈ ಪ್ರಕರಣದಲ್ಲಿ 2022ರಲ್ಲಿ ಜಾರಿ ನಿರ್ದೇಶನಾಲಯವು ಆರೋಪ ಪಟ್ಟಿ ಸಲ್ಲಿಸಿದೆ. ಜಮ್ಮು ಮತ್ತು ಕಾಶ್ಮೀರ ಕ್ರಿಕೆಟ್ ಸಂಸ್ಥೆಯ ಹಣವನ್ನು ತಮ್ಮ ವೈಯಕ್ತಿಕ ಬ್ಯಾಂಕ್‌ ಖಾತೆಗೆ ವರ್ಗಾಯಿಸಿದ ಹಾಗೂ ಅದನ್ನು ಬ್ಯಾಂಕ್‌ನಿಂದ ನಗದು ರೂಪದಲ್ಲಿ ಪಡೆದ ಪ್ರಕರಣ ಕುರಿತು ಜಾರಿ ನಿರ್ದೇಶನಾಲಯ ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.