ADVERTISEMENT

ಅನಿಲ್‌ ದೇಶಮುಖ್‌ ವಿಚಾರಣೆಗೆ ಗೈರು ಹಾಜರು: ನ್ಯಾಯಾಲಯದ ಮೊರೆ ಹೋದ ಇ.ಡಿ

ಪಿಟಿಐ
Published 18 ಸೆಪ್ಟೆಂಬರ್ 2021, 8:40 IST
Last Updated 18 ಸೆಪ್ಟೆಂಬರ್ 2021, 8:40 IST
ಅನಿಲ್‌ ದೇಶಮುಖ್‌
ಅನಿಲ್‌ ದೇಶಮುಖ್‌   

ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಗೆ ಗೈರು ಹಾಜರಾಗಿರುವ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್‌ ದೇಶಮುಖ್‌ ವಿರುದ್ಧ ಜಾರಿ ನಿರ್ದೇಶನಾಲಯವು (ಇ.ಡಿ) ನ್ಯಾಯಾಲಯದ ಮೊರೆ ಹೋಗಿದೆ.

ಅನಿಲ್‌ ದೇಶಮುಖ್‌ ಅವರಿಗೆ ಹಲವು ಬಾರಿ ಸಮನ್ಸ್‌ ಜಾರಿ ಮಾಡಲಾಗಿದೆ. ಆದರೂ, ಅವರು ವಿಚಾರಣೆಗೆ ಗೈರು ಹಾಜರಾಗಿದ್ದಾರೆ. ಹಾಗಾಗಿ ಅವರ ವಿರುದ್ಧ ಐಪಿಸಿ ಕಲಂ 174ರ ಪ್ರಕಾರ ಕ್ರಮಕೈಗೊಳ್ಳಬೇಕೆಂದು ವಿಶೇಷ ನ್ಯಾಯಾಲಯದಲ್ಲಿ ಇ.ಡಿ ಶುಕ್ರವಾರ ಅರ್ಜಿ ಸಲ್ಲಿಸಿದೆ.

ಈ ಕಲಂನಡಿ ಒಂದು ತಿಂಗಳ ಸರಳ ಜೈಲು ಶಿಕ್ಷೆ ಅಥವಾ ₹500 ದಂಡ, ಇಲ್ಲವೇ ಎರಡನ್ನೂ ವಿಧಿಸಲು ಅವಕಾಶವಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.