
ತಿರುವನಂತಪುರ: ಕೇರಳ ಮೂಲ ಸೌಕರ್ಯ ಹೂಡಿಕೆ ನಿಧಿ ಮಂಡಳಿಯ (ಕಿಫ್‌ಬಿ) ಯೋಜನೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಕ್ಕೆ ಸಂಬಂಧಿಸಿ, ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಫೆಮಾ) ಅಡಿ ದಾಖಲಾಗಿರುವ ಪ್ರಕರಣದ ಸಂಬಂಧ ಜಾರಿ ನಿರ್ದೇಶನಾಲಯವು (ಇ.ಡಿ) ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ನೋಟಿಸ್ ಜಾರಿ ಮಾಡಿದೆ.
ಇದೇ ಪ್ರಕರಣ ಸಂಬಂಧ ವಿಜಯನ್ ಅವರಲ್ಲದೆ, ಮಾಜಿ ಹಣಕಾಸು ಸಚಿವ ಮತ್ತು ಸಿಪಿಎಂ ನಾಯಕ ಥಾಮಸ್ ಐಸಾಕ್ ಮತ್ತು ಕಿಫ್‌ಬಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಅಬ್ರಹಾಂ ಅವರಿಗೆ ನೋಟಿಸ್ ನೀಡಲಾಗಿದೆ ಎಂದು ಇ.ಡಿ ಮೂಲಗಳು ತಿಳಿಸಿವೆ.
2019ರಲ್ಲಿ ಫೆಮಾ ಕಾಯ್ದೆಯನ್ನು ಉಲ್ಲಂಘಿಸಿ ಮಸಾಲಾ ಬಾಂಡ್‌ಗಳ ಮೂಲಕ ಕಿಫ್‌ಬಿ ₹2,150 ಕೋಟಿ ಸಂಗ್ರಹಿಸಿತ್ತು ಎಂದು ಆರೋಪಿಸಲಾಗಿದೆ.
ಕಿಫ್‌ಬಿಯ ಮಸಾಲಾ ಬಾಂಡ್‌ನಲ್ಲಿ ಅಕ್ರಮಗಳು ನಡೆದಿವೆ ಎಂದು ಆಡಿಟರ್ ಜನರಲ್ ಈ ಹಿಂದೆ ಪ್ರಸ್ತಾಪಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.