ಜಾರಿ ನಿರ್ದೇಶನಾಲಯ
ನವದೆಹಲಿ: ಹಣದ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ದೆಹಲಿಯ ಮಾಜಿ ಸಚಿವ, ಎಎಪಿ ನಾಯಕ ಸತ್ಯೇಂದ್ರ ಜೈನ್ ಗುರುವಾರ ಜಾರಿ ನಿರ್ದೇಶನಾಲಯದ (ಇ.ಡಿ) ಮುಂದೆ ವಿಚಾರಣೆಗೆ ಹಾಜರಾದರು. ಅವರ ಹೇಳಿಕೆಯನ್ನು ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ದಾಖಲಿಸಲಾಗುತ್ತಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ದೆಹಲಿ ಜಲ ಮಂಡಳಿ(ಡಿಜೆಬಿ)ಯ 10 ಒಳಚರಂಡಿ ಸಂಸ್ಕರಣಾ ಘಟಕಗಳ ಕಾಮಗಾರಿ ಹೆಸರಿನಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪದಡಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ವಿಚಾರಣೆ ನಡೆಯುತ್ತಿದೆ. ದೆಹಲಿ ಸರ್ಕಾರದ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ವು ಯುರೋಟೆಕ್ ಎನ್ವಿರಾನ್‌ಮೆಂಟಲ್ ಪ್ರೈವೇಟ್ ಲಿಮಿಟೆಡ್ ಎಂಬ ಕಂಪನಿ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಿಸಿದ ನಂತರ ಕಳೆದ ವರ್ಷದ ಜುಲೈನಲ್ಲಿ ಈ ಪ್ರಕರಣದಲ್ಲಿ ಇ.ಡಿ ಕೂಡ ತನಿಖೆ ಆರಂಭಿಸಿತ್ತು.
ಟೆಂಡರ್ ದಾಖಲೆಗಳ ಪರಿಶೀಲನೆಯ ಪ್ರಕಾರ, ನಾಲ್ಕು ಕಾಮಗಾರಿಗಳ ಟೆಂಡರ್‌ಗಳ ಆರಂಭಿಕ ವೆಚ್ಚ ಸುಮಾರು ₹ 1,546 ಕೋಟಿ ಆಗಿತ್ತು. ಸರಿಯಾದ ಪ್ರಕ್ರಿಯೆ ನಡೆಸದೆ, ಪೂರಕ ಯೋಜನಾ ವರದಿಗಳಿಲ್ಲದೇ ಕಾಮಗಾರಿ ವೆಚ್ಚವನ್ನು ₹ 1,943 ಕೋಟಿಗೆ ಪರಿಷ್ಕರಿಸಲಾಗಿತ್ತು ಎಂದು ಇ.ಡಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.