
ಕೊಚ್ಚಿ: ಶಬರಿಮಲೆ ಚಿನ್ನ ಕಳವು ಪ್ರಕರಣದೊಂದಿಗೆ ತಳಕು ಹಾಕಿಕೊಂಡಿರುವ ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ತಿರುವಂಕೂರು ದೇವಸ್ವಂ ಮಂಡಳಿಯ (ಟಿಡಿಬಿ) ಮಾಜಿ ಅಧಿಕಾರಿ ಮುರಾರಿ ಬಾಬು ಅವರನ್ನು ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಮಂಗಳವಾರ ವಿಚಾರಣೆ ನಡೆಸಿದ್ದಾರೆ.
ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಮುರಾರಿ ಅವರ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗಿದೆ. ಇದೇ ಪ್ರಕರಣದ ತನಿಖೆಯ ಭಾಗವಾಗಿ ಕೇರಳದ ವಿಶೇಷ ತನಿಖಾ ತಂಡವು (ಎಸ್‌ಐಟಿ) ಮುರಾರಿ ಅವರನ್ನು ಬಂಧಿಸಿತ್ತು. ಇತ್ತೀಚೆಗಷ್ಟೇ ಅವರಿಗೆ ಜಾಮೀನು ದೊರೆತಿದೆ ಎಂದೂ ಅಧಿಕಾರಿಗಳು ತಿಳಿಸಿದ್ದಾರೆ.
ಕೆಲ ದಿನಗಳ ಹಿಂದಷ್ಟೇ ಟಿಡಿಬಿಯ ಮತ್ತೊಬ್ಬ ಮಾಜಿ ಅಧಿಕಾರಿ ಎಸ್.ಶ್ರೀಕುಮಾರ್ ಅವರನ್ನೂ ಇ.ಡಿ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದರು. ಜತೆಗೆ ಕಳೆದ ತಿಂಗಳು ವಿವಿಧ ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆಯನ್ನೂ ಅಧಿಕಾರಿಗಳು ನಡೆಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.