ADVERTISEMENT

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಐದನೇ ಬಾರಿ ಇ.ಡಿ ವಿಚಾರಣೆಗೆ ಹಾಜರಾದ ರಾಹುಲ್ ಗಾಂಧಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 21 ಜೂನ್ 2022, 7:56 IST
Last Updated 21 ಜೂನ್ 2022, 7:56 IST
ರಾಹುಲ್ ಗಾಂಧಿ – ಪಿಟಿಐ ಚಿತ್ರ
ರಾಹುಲ್ ಗಾಂಧಿ – ಪಿಟಿಐ ಚಿತ್ರ   

ನವದೆಹಲಿ:ನ್ಯಾಷನಲ್ ಹೆರಾಲ್ಡ್‌ಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಮಂಗಳವಾರ ವಿಚಾರಣೆಗೆ ಒಳಪಡಿಸಿದರು.

ಇದರೊಂದಿಗೆ, ಐದನೇ ಬಾರಿ ರಾಹುಲ್ ಅವರು ವಿಚಾರಣೆಗೆ ಹಾಜರಾದಂತಾಗಿದೆ.

ಜೂನ್ 13ರಂದು ಮೊದಲ ಬಾರಿ ರಾಹುಲ್ ವಿಚಾರಣೆಗೆ ಹಾಜರಾಗಿದ್ದರು. ಒಟ್ಟು 40 ಗಂಟೆಗಳ ಕಾಲ ವಿಚಾರಣೆ ಎದುರಿಸಿದ್ದಾರೆ.

ADVERTISEMENT

ರಾಹುಲ್ ಗಾಂಧಿ ಅವರನ್ನು ವಿಚಾರಣೆಗೆ ಒಳಪಡಿಸುತ್ತಿರುವುದನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ನಡೆಸುತ್ತಿರುವ ಪ್ರತಿಭಟನೆ ಮುಂದುವರಿದಿದೆ.

ಈ ಮಧ್ಯೆ, ಕೋವಿಡೋತ್ತರ ಆರೋಗ್ಯ ಸಮಸ್ಯೆಗಳಿಗಾಗಿ ಚಿಕಿತ್ಸೆ ಪಡೆಯುತ್ತಿದ್ದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಸೋಮವಾರ ಸಂಜೆ ದೆಹಲಿಯ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಅವರಿಗೆ ಜಾರಿ ನಿರ್ದೇಶನಾಲಯ ಮತ್ತೆ ಸಮನ್ಸ್ ನೀಡಿದೆ. ಜೂನ್ 23ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.

ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.