ನವದೆಹಲಿ: ಹರಿಯಾಣದ ಭೂ ವ್ಯವಹಾರದ ನಂಟಿನ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು (ಇ.ಡಿ) ಉದ್ಯಮಿ ರಾಬರ್ಟ್ ವಾದ್ರಾ ಅವರನ್ನು ಬುಧವಾರವೂ ವಿಚಾರಣೆಗೆ ಒಳಪಡಿಸಿತು.
ವಾದ್ರಾ ಅವರು ಬೆಳಿಗ್ಗೆ 11 ಗಂಟೆ ಸುಮಾರಿಗೆ ಪತ್ನಿ ಪ್ರಿಯಾಂಕಾ ಗಾಂಧಿ ಅವರೊಂದಿಗೆ ಇ.ಡಿ ಕಚೇರಿಗೆ ಹಾಜರಾಗಿದ್ದರು.
ಮಂಗಳವಾರವೂ ಐದು ತಾಸು ವಾದ್ರಾ ಅವರನ್ನು ಪ್ರಶ್ನಿಸಲಾಗಿತ್ತು ಎಂದು ಮೂಲಗಳು ತಿಳಿಸಿವೆ.
ವಾದ್ರಾ ಅವರು, ‘ಇ.ಡಿ ಕ್ರಮವು ರಾಜಕೀಯ ಪಿತೂರಿಯ ಭಾಗ. ದೇಶದ ಜನರು ತನಿಖಾ ಸಂಸ್ಥೆಗಳ ಮೇಲೆ ನಂಬಿಕೆ ಕಳೆದುಕೊಂಡಿದ್ದಾರೆ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.