ADVERTISEMENT

ಬ್ಯಾಂಕ್ ಸಾಲ ವಂಚನೆ ಪ್ರಕರಣ: ತಮಿಳುನಾಡು, ಪಶ್ಚಿಮ ಬಂಗಾಳ, ಗೋವಾದಲ್ಲಿ ಇ.ಡಿ ದಾಳಿ

​ಪ್ರಜಾವಾಣಿ ವಾರ್ತೆ
Published 2 ಸೆಪ್ಟೆಂಬರ್ 2025, 11:23 IST
Last Updated 2 ಸೆಪ್ಟೆಂಬರ್ 2025, 11:23 IST
<div class="paragraphs"><p>ಇ.ಡಿ</p></div>

ಇ.ಡಿ

   

ನವದೆಹಲಿ: ₹637 ಕೋಟಿ ಬ್ಯಾಂಕ್‌ ಸಾಲ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣ ವರ್ಗಾವಣೆ ತನಿಖೆಯ ಭಾಗವಾಗಿ ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಗೋವಾದಲ್ಲಿ ಜಾರಿ ನಿರ್ದೇಶನಾಲಯ(ಇ.ಡಿ) ಮಂಗಳವಾರ ಶೋಧ ಕಾರ್ಯಾಚರಣೆ ನಡೆಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಚೆನ್ನೈ ಮೂಲದ ಅರವಿಂದ್ ರೆಮಿಡೀಸ್ ಕಂಪನಿ ಹಾಗೂ ಅದರ ಮಾಲೀಕ ಅರವಿಂದ್ ಬಿ. ಶಾ ವಿರುದ್ಧ ದಾಖಲಾಗಿದ್ದ ದೂರಿನ ಆಧಾರದಡಿ ಶೋಧ ಕಾರ್ಯಾಚರಣೆ ನಡೆಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ADVERTISEMENT

ಚೆನ್ನೈ, ಕಾಂಚೀಪುರಂ, ಕೋಲ್ಕತ್ತಾ ಮತ್ತು ಗೋವಾದ ಕೆಲವು ಸ್ಥಳಗಳಲ್ಲಿ ಇ.ಡಿ ಅಧಿಕಾರಿಗಳು ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ದಾಳಿ ನಡೆಸಿದ್ದಾರೆ.

ಪಂಜಾಬ್ ನ್ಯಾಷನಲ್ ಬ್ಯಾಂಕ್ ನೇತೃತ್ವದ ಸಾಲದಾತರ ಒಕ್ಕೂಟಕ್ಕೆ ₹637 ಕೋಟಿ ವಂಚನೆ ಮಾಡಿದ್ದು, ಆರೋಪಿ ಅರವಿಂದ್ ವಿರುದ್ಧ 2021ರಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು ಎಂದು ಇ.ಡಿ ಅಧಿಕಾರಿಗಳು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.