ಕೋಲ್ಕತ್ತ: ಅನಿವಾಸಿ ಭಾರತೀಯ (ಎನ್‌ಆರ್‌ಐ) ಕೋಟಾದಡಿ ಖಾಸಗಿ ವೈದ್ಯಕೀಯ ಕಾಲೇಜುಗಳ ಪ್ರವೇಶದಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ (ಇಡಿ) ಕೋಲ್ಕತ್ತದ ವಿವಿಧ ಸ್ಥಳಗಳಲ್ಲಿ ದಾಳಿ ನಡೆಸಿದೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.
ನಗರದ ಬ್ಯಾಲಿಗಂಜ್ ಪ್ರದೇಶ ಮತ್ತು ಪೂರ್ವ ಕೋಲ್ಕತ್ತದ ಹೊರವಲಯದ ವೈದ್ಯಕೀಯ ತರಬೇತಿ ಕೇಂದ್ರಗಳಲ್ಲಿ ಏಕಕಾಲದಲ್ಲಿ ಐದು ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸಲಾಗಿದೆ ಎಂದು ಅವರು ಹೇಳಿದ್ದಾರೆ.
ಎನ್‌ಆರ್‌ಐ ಕೋಟಾದಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದಡಿ ಈ ದಾಳಿ ನಡೆಸಲಾಗಿದೆ ಎಂದು ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ.
ಒಡಿಶಾದ ಭುವನೇಶ್ವರ ಮತ್ತು ರೂರ್ಕೆಲಾದ ವೈದ್ಯಕೀಯ ಕಾಲೇಜುಗಳಲ್ಲಿ ಭಾರತೀಯ ವಿದ್ಯಾರ್ಥಿಗಳ ಪ್ರವೇಶಕ್ಕಾಗಿ ಸುಳ್ಳು ಎನ್‌ಆರ್‌ಐ ದಾಖಲೆಗಳನ್ನು ಸೃಷ್ಟಿಸಿ ಪ್ರವೇಶ ಪಡೆಯಲಾಗಿದೆ ಎಂಬ ಆರೋಪದಡಿ ಈ ತನಿಖೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.