ಇ.ಡಿ
ನವದೆಹಲಿ: ಹೂಡಿಕೆದಾರರಿಗೆ ₹2,700 ಕೋಟಿ ವಂಚಿಸಿದ ಆರೋಪದ ಮೇಲೆ ದಾಖಲಾಗಿರುವ ಹಣ ಅಕ್ರಮ ವರ್ಗಾವಣೆ ಪ್ರಕರಣದ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಗುರುವಾರ ರಾಜಸ್ಥಾನ ಮತ್ತು ಗುಜರಾತ್‌ನ ಹಲವೆಡೆ ಶೋಧ ಕಾರ್ಯಾಚರಣೆ ನಡೆಸಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
‘ನೆಕ್ಸಾ ಎವರ್‌ಗ್ರೀನ್’ ಕಂಪನಿಯ ವಿರುದ್ಧ ರಾಜಸ್ಥಾನ ಪೊಲೀಸರು ದಾಖಲಿಸಿದ ಎಫ್‌ಐಆರ್ ಆಧರಿಸಿ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದು ಇ.ಡಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಗುಜರಾತ್‌ನ ಧೋಲೇರಾ ನಗರದಲ್ಲಿ ಹೆಚ್ಚಿನ ಆದಾಯ ಮತ್ತು ಭೂಮಿ ನೀಡುವುದಾಗಿ ಭರವಸೆ ನೀಡುವ ಮೂಲಕ ‘ನೆಕ್ಸಾ ಎವರ್‌ಗ್ರೀನ್’ ಕಂಪನಿಯು ಹೂಡಿಕೆದಾರರಿಗೆ ₹2,700 ಕೋಟಿ ವಂಚಿಸಿದೆ ಎಂದು ಆರೋಪಿಸಲಾಗಿದೆ.
ಪ್ರಕರಣ ಸಂಬಂಧ ರಾಜಸ್ಥಾನದ ಸಿಕಾರ್, ಜೈಪುರ, ಜೋಧಪುರ ಹಾಗೂ ಗುಜರಾತ್‌ನ ಅಹಮದಾಬಾದ್‌ನಲ್ಲಿ 20ಕ್ಕೂ ಹೆಚ್ಚು ಸ್ಥಳಗಳಲ್ಲಿ ಶೋಧ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.