ADVERTISEMENT

ಹಣ ಅಕ್ರಮ ವರ್ಗಾವಣೆ: ಜಾರ್ಖಂಡ್ ಸಿ.ಎಂ ಆಪ್ತರ ಮೇಲೆ ಇ.ಡಿ ದಾಳಿ

ಪಿಟಿಐ
Published 8 ಜುಲೈ 2022, 11:38 IST
Last Updated 8 ಜುಲೈ 2022, 11:38 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ರಾಂಚಿ: ‘ಟೋಲ್‌ ಪ್ಲಾಜಾ ಟೆಂಡರ್‌ಗಳ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್‌ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರ ರಾಜಕೀಯ ಪ್ರತಿನಿಧಿ ಪಂಕಜ್ ಮಿಶ್ರಾ ಮತ್ತು ಅವರೊಂದಿಗೆ ನಂಟು ಹೊಂದಿರುವವರ ವಿರುದ್ಧ ಸುಮಾರು 18 ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯವು (ಇ.ಡಿ) ಶುಕ್ರವಾರ ದಾಳಿ ನಡೆಸಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ಸಾಹಿಬ್‌ಗಂಜ್ ಜಿಲ್ಲೆ ಹಾಗೂ ಬರ್ಹೈತ್ ಮತ್ತು ರಾಜ್‌ಮಹಲ್‌ ಪಟ್ಟಣಗಳಲ್ಲಿ ಶೋಧಗಳನ್ನು ನಡೆಸಲಾಗುತ್ತಿದೆ.ಸುಮಾರು 18 ಸ್ಥಳಗಳಲ್ಲಿ ಶೋಧ ನಡೆಸಲಾಗುತ್ತಿದ್ದು, ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್‌ಎ) ಕ್ರಿಮಿನಲ್ ಸೆಕ್ಷನ್‌ಗಳ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದು’ ಎಂದು ಅವರು ಹೇಳಿದರು.

‘ಅಕ್ರಮ ಕಲ್ಲಿದ್ದಲು ಗಣಿಗಾರಿಕೆಯ ನಿರ್ವಾಹಕರು ಮತ್ತು ಟೋಲ್ ಪ್ಲಾಜಾ ಟೆಂಡರ್‌ಗಳ ಕಾರ್ಯಾಚರಣೆಯಲ್ಲಿ ಭಾಗಿಯಾಗಿರುವವರ ನಡುವಿನ ಉದ್ದೇಶಪೂರ್ವಕ ನಂಟುಗಳನ್ನು ಇ.ಡಿ ಪರಿಶೀಲಿಸುತ್ತಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಜಾರ್ಖಂಡ್‌ನ ಗಣಿಗಾರಿಕೆಯ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದ ಐಎಎಸ್ ಅಧಿಕಾರಿ ಪೂಜಾ ಸಿಂಘಾಲ್ ಮತ್ತು ಸಿಂಘಾಲ್‌ ಅವರ ಉದ್ಯಮಿ ಪತಿ ಹಾಗೂ ಇತರರ ವಿರುದ್ಧ ಹಣ ಅಕ್ರಮ ವರ್ಗಾವಣೆಯ ತನಿಖೆಗೆ ಸಂಬಂಧಿಸಿದಂತೆ ಇ.ಡಿ ಮೇ ತಿಂಗಳಲ್ಲಿ ದಾಳಿ ನಡೆಸಿತ್ತು. ಬಳಿಕ ಅಲ್ಲಿನ ಸರ್ಕಾರವು ಸಿಂಘಾಲ್‌ ಅವರನ್ನು ಅವರ ಕೆಲಸದಿಂದ ಅಮಾನತುಗೊಳಿಸಿತ್ತು.

ಅಲ್ಲದೆ ಇದೇ ತಿಂಗಳ ಎರಡನೇ ವಾರದ ಆರಂಭದಲ್ಲಿ ರಾಂಚಿಯ ವಿಶೇಷ ಪಿಎಂಎಲ್‌ಎ ನ್ಯಾಯಾಲಯಕ್ಕೆ ಇ.ಡಿ ಪೂಜಾ ಸಿಂಘಾಲ್‌ ಮತ್ತು ಇತರರ ವಿರುದ್ಧ ಚಾರ್ಜ್‌ಶೀಟ್‌ ಅನ್ನು ಸಲ್ಲಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.