
ಪಿಟಿಐ
ನವದೆಹಲಿ: ವೈದ್ಯಕೀಯ ಕಾಲೇಜುಗಳಲ್ಲಿ ಕೋರ್ಸ್ ನಡೆಸಲು ಶೈಕ್ಷಣಿಕ ಅನುಮತಿ ನೀಡಲಿಕ್ಕಾಗಿ ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿದ ಹಣ ಅಕ್ರಮ ವಹಿವಾಟಿನ ನಂಟಿನ ತನಿಖೆಗಾಗಿ ಜಾರಿ ನಿರ್ದೇಶನಾಲಯವು (ಇ.ಡಿ) ಹತ್ತು ರಾಜ್ಯಗಳಲ್ಲಿ ಗುರುವಾರ ಶೋಧ ನಡೆಸಿತು.
ಆಂಧ್ರ ಪ್ರದೇಶ, ತೆಲಂಗಾಣ, ಮಹಾರಾಷ್ಟ್ರ, ಮಧ್ಯಪ್ರದೇಶ, ಛತ್ತೀಸಗಢ, ಗುಜರಾತ್, ರಾಜಸ್ಥಾನ, ಬಿಹಾರ, ಉತ್ತರ ಪ್ರದೇಶ ಮತ್ತು ದೆಹಲಿಯ 15 ಸ್ಥಳಗಳಲ್ಲಿ ಶೋಧ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹಣ ಅಕ್ರಮ ವರ್ಗಾವಣೆ ತಡೆ (ಪಿಎಂಎಲ್‌ಎ) ಕಾಯ್ದೆಯಡಿ ಏಳು ವೈದ್ಯಕೀಯ ಕಾಲೇಜುಗಳ ಆವರಣ ಸೇರಿದಂತೆ ಖಾಸಗಿ ಸ್ಥಳಗಳಲ್ಲಿಯೂ ಶೋಧ ನಡೆದಿದೆ ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.