ADVERTISEMENT

ಜಾರ್ಖಂಡ್‌: 14 ಕಡೆ ಇಡಿ ದಾಳಿ, ಐಎಎಸ್ ಅಧಿಕಾರಿ ಪೂಜಾಗೆ ಸೇರಿದ ₹3 ಕೋಟಿ ನಗದು ವಶ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 3 ಮಾರ್ಚ್ 2023, 10:24 IST
Last Updated 3 ಮಾರ್ಚ್ 2023, 10:24 IST
ಇಡಿ ಅಧಿಕಾರಿಗಳು ವಶಪಡಿಸಿಕೊಂಡಿರುವ ನಗದು (ಟ್ವಿಟರ್ ಚಿತ್ರ)
ಇಡಿ ಅಧಿಕಾರಿಗಳು ವಶಪಡಿಸಿಕೊಂಡಿರುವ ನಗದು (ಟ್ವಿಟರ್ ಚಿತ್ರ)   

ರಾಂಚಿ: ಜಾರ್ಖಂಡ್‌ನ ಹಲವು ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಶುಕ್ರವಾರ ದಾಳಿ ನಡೆಸಿದ್ದಾರೆ.

ಜಾರ್ಖಂಡ್ ರಾಜ್ಯ ಖನಿಜ ಅಭಿವೃದ್ಧಿ ನಿಗಮದ (ಜೆಎಸ್‌ಎಂಡಿಸಿ) ಮಾಜಿ ಉದ್ಯೋಗಿ ಅಶೋಕ್ ಕುಮಾರ್ ಮತ್ತು ಎಹ್ಸಾನ್ ಅನ್ಸಾರಿ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿರುವ ಇಡಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಅಶೋಕ್ ಕುಮಾರ್ ಮತ್ತು ಎಹ್ಸಾನ್ ಅನ್ಸಾರಿಗೆ ಸೇರಿದ ರಾಂಚಿ ಮತ್ತು ಹಜಾರಿಬಾಗ್‌ನಲ್ಲಿರುವ 14 ಸ್ಥಳಗಳಲ್ಲಿ ಇಡಿ ಅಧಿಕಾರಿಗಳು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಸುದ್ದಿಸಂಸ್ಥೆ ‘ಎಎನ್‌ಐ’ ವರದಿ ಮಾಡಿದೆ.

ADVERTISEMENT

ಅನ್ಸಾರಿ ಬಳಿ ₹3 ಕೋಟಿ ನಗದು ವಶಪಡಿಸಿಕೊಳ್ಳಲಾಗಿದೆ.ಈ ಹಣ ಐಎಎಸ್ ಅಧಿಕಾರಿ ಪೂಜಾ ಸಿಂಘಾಲ್‌ಗೆ ಸಂಬಂಧಿಸಿದ್ದಾಗಿದೆ ಎಂದು ಇಡಿ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.