ADVERTISEMENT

ಜಿವಿಕೆ, ಮಿಯಾಲ್‌ ವಿರುದ್ಧ ಹಣ ಅಕ್ರಮ ವರ್ಗಾವಣೆ ಆರೋಪ: 9 ಕಡೆ ಇ.ಡಿ ಶೋಧ

ಪಿಟಿಐ
Published 28 ಜುಲೈ 2020, 9:22 IST
Last Updated 28 ಜುಲೈ 2020, 9:22 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ಮುಂಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ವಹಣೆಯಲ್ಲಿಜಿವಿಕೆ ಸಮೂಹ ಸಂಸ್ಥೆಗಳ ವಿರುದ್ಧ ಕೇಳಿಬಂದಿರುವ ಹಣ ಅಕ್ರಮ ವರ್ಗಾವಣೆ ಆರೋಪದ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮುಂಬೈ ಮತ್ತು ಹೈದರಾಬಾದ್‌ನ ಒಂಬತ್ತು ಸ್ಥಳಗಳಲ್ಲಿ ಮಂಗಳವಾರ ಶೋಧ ನಡೆಸಿದರು.

ಜಿವಿಕೆ ಸಮೂಹ ಸಂಸ್ಥೆಗಳು ಮತ್ತು ಮುಂಬೈ ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳ ಕಚೇರಿಗಳಲ್ಲಿ ಶೋಧ ನಡೆಸಿದರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಈ ಹಿಂದೆ, ಮುಂಬೈ ಇಂಟರ್‌ನ್ಯಾಷನಲ್‌ ಏರ್‌ಪೋರ್ಟ್‌ ಲಿ. (ಎಂಎಐಎಲ್‌) ಸಂಸ್ಥೆಯಲ್ಲಿ ನಡೆದಿದೆ ಎನ್ನಲಾದ ₹ 705 ಕೋಟಿ ಮೊತ್ತದ ಅಕ್ರಮಕ್ಕೆ ಸಂಬಂಧಿಸಿದಂತೆ, ಜಾರಿ ನಿರ್ದೇಶನಾಲಯವು ಜಿವಿಕೆ ಗ್ರೂಪ್‌, ಎಂಎಐಎಲ್‌ ಹಾಗೂ ಇತರರ ವಿರುದ್ಧ ಹಣ ಅಕ್ರಮ ವರ್ಗಾವಣೆ ಆರೋಪದಡಿ ದೂರು ದಾಖಲಿಸಿತ್ತು.ಇದೇ ವಿಷಯಕ್ಕೆ ಸಂಬಂಧಿಸಿದಂತೆ ಈ ಸಂಸ್ಥೆಗಳ ವಿರುದ್ಧ ಸಿಬಿಐ ಕೂಡ ಈಚೆಗೆ ಎಫ್‌ಐಆರ್‌ ದಾಖಲಿಸಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.