ADVERTISEMENT

ದೆಹಲಿ: ಉದ್ಯಮಿ ನವನೀತ್ ಕಾಲ್ರಾಗೆ ಸೇರಿದ ಸ್ಥಳಗಳಲ್ಲಿ ಇಡಿ ಶೋಧ

ಪಿಟಿಐ
Published 21 ಮೇ 2021, 8:51 IST
Last Updated 21 ಮೇ 2021, 8:51 IST
ಜಾರಿ ನಿರ್ದೇಶನಾಲಯ
ಜಾರಿ ನಿರ್ದೇಶನಾಲಯ   

ನವದೆಹಲಿ: ಆಮ್ಲಜನಕ ಕಾನ್ಸನ್‌ಟ್ರೇಟರ್‌ಗಳ ಅಕ್ರಮ ದಾಸ್ತಾನು ಮತ್ತು ಕಾಳಸಂತೆಯಲ್ಲಿ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ನವನೀತ್ ಕಾಲ್ರಾ ಮತ್ತು ಅವರ ಸಹಚರರಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯವು(ಇ.ಡಿ.) ಶುಕ್ರವಾರ ಶೋಧ ನಡೆಸಿದೆ.

‘ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಡಿ (ಪಿಎಂಎಲ್‌ಎ) ದೆಹಲಿಯ ಹಲವೆಡೆ ಇಡಿಯು ಶೋಧ ನಡೆಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿಗಳನ್ನು ಕಲೆ ಹಾಕುವ ನಿಟ್ಟಿನಲ್ಲಿ ದಾಳಿಯನ್ನು ನಡೆಸಲಾಗಿದೆ’ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಮೇ 5ರಂದು ದೆಹಲಿ ಪೊಲೀಸರು ಆಮ್ಲಜನಕ ಕಾನ್ಸನ್‌ಟ್ರೇಟರ್‌ಗಳ ಅಕ್ರಮ ದಾಸ್ತಾನು ಪ್ರಕರಣದಡಿ ಕಾಲ್ರಾ ವಿರುದ್ಧ ‍ಎಫ್‌ಐಆರ್‌ ದಾಖಲಿಸಿದ್ದರು. ಅಲ್ಲದೆ ಕಾಲ್ರಾಗೆ ಸಂಬಂಧಿಸಿದ ರೆಸ್ಟೊರೆಂಟ್‌ ಮತ್ತು ಸ್ಥಳಗಳಲ್ಲಿ ದಾಳಿ ನಡೆಸಿದ್ದರು.ಈ ವೇಳೆ 500 ಕ್ಕೂ ಹೆಚ್ಚು ಆಮ್ಲಜನಕ ಕಾನ್ಸನ್‌ಟ್ರೇಟರ್‌ಗಳನ್ನು ವಶಕ್ಕೆ ಪಡೆಯಲಾಗಿತ್ತು. ಇದನ್ನು ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪವು ಕೇಳಿಬಂದಿತ್ತು. ಇದರ ಬೆನ್ನಲ್ಲೇ ಇಡಿಯು ಪಿಎಂಎಲ್‌ಎ ಕಾಯ್ದೆಯಡಿ ಕಾಲ್ರಾ ಮತ್ತು ಇತರರ ವಿರುದ್ಧ ದೂರ ದಾಖಲಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.