ADVERTISEMENT

ರಸಗೊಬ್ಬರ ಹಗರಣ: ಗೆಹ್ಲೋಟ್‌ ಸೋದರನ ಮನೆಯಲ್ಲಿ ಇ.ಡಿ ಶೋಧ

ಪಿಟಿಐ
Published 22 ಜುಲೈ 2020, 7:57 IST
Last Updated 22 ಜುಲೈ 2020, 7:57 IST
ಅಶೋಕ್‌ ಗೆಹ್ಲೋಟ್‌
ಅಶೋಕ್‌ ಗೆಹ್ಲೋಟ್‌   

ನವದೆಹಲಿ: ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ಬುಧವಾರ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌ ಅವರ ಸಹೋದರ, ಅಗ್ರಸೇನ ಗೆಹ್ಲೋಟ್‌ ಅವರ ನಿವಾಸದಲ್ಲಿ ಶೋಧ ಕಾರ್ಯ ನಡೆಸಿದ್ದಾರೆ. ರಸಗೊಬ್ಬರ ಹಗರಣಕ್ಕೆ ಸಂಬಂಧಿಸಿದಂತೆ ನಡೆದಿದೆ ಎನ್ನಲಾದ ಹಣದ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ದೇಶದ 13 ಕಡೆ ಶೋಧ ಕಾರ್ಯ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಜಸ್ಥಾನ, ಪಶ್ಚಿಮ ಬಂಗಾಳ, ಗುಜರಾತ್‌ ದೆಹಲಿ ಸೇರಿದಂತೆ ದೇಶದ ವಿವಿಧ ರಾಜ್ಯಗಳ 13 ಕಡೆಗಳಲ್ಲಿ ಶೋಧ ನಡೆಸಲಾಗುತ್ತಿದೆ. ರಸಗೊಬ್ಬರ ಹಗರಣಕ್ಕೆ ಸಂಬಂಧಿಸಿದಂತೆ ಅಗ್ರಸೇನ ಅವರಿಗೆ ಕಸ್ಟಮ್ಸ್‌ ವಿಭಾಗವು ಏಳು ಕೋಟಿ ರೂಪಾಯಿ ದಂಡ ವಿಧಿಸಿತ್ತು. ಆ ವಿಭಾಗದ ದೂರಿನ ಆಧಾರದಲ್ಲಿ ಇ.ಡಿಯು ಹಣದ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿ ಕ್ರಿಮಿನಲ್‌ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಜಸ್ಥಾನದ 6 ಕಡೆ, ಗುಜರಾತ್‌ನ 4, ಪಶ್ಚಿಮ ಬಂಗಾಳದ 2 ಹಾಗೂ ದೆಹಲಿಯ ಒಂದು ಕಡೆ ಶೋಧ ಕಾರ್ಯ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.