
ಇ.ಡಿ
ಕೋಲ್ಕತ್ತ: ಸಂಘಟಿತ ಮಾನವ ಕಳ್ಳಸಾಗಣೆ ಮತ್ತು ವೇಶ್ಯಾವಾಟಿಕೆಗೆ ಸಂಬಂಧಿತ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಪಶ್ಚಿಮ ಬಂಗಾಳದ ವಿವಿಧೆಡೆ ಹಲವು ಬಾರ್ ಮತ್ತು ರೆಸ್ಟೋರೆಂಟ್‌ಗಳ ಮೇಲೆ ಜಾರಿ ನಿರ್ದೇಶನಾಲಯದ(ಇ.ಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬಿಧಾನ್‌ನಗರ(ಉತ್ತರ 24 ಪರಗಣ ಜಿಲ್ಲೆ), ಕೋಲ್ಕತ್ತ ಮತ್ತು ಸಿಲಿಗುರಿಯಲ್ಲಿ ಕನಿಷ್ಠ ಎಂಟು ಸ್ಥಳಗಳ ಮೇಲೆ ತನಿಖಾ ಸಂಸ್ಥೆಯು ಹಣ ವರ್ಗಾವಣೆ ತಡೆ ಕಾಯ್ದೆ(ಪಿಎಂಎಲ್‌ಎ) ನಿಬಂಧನೆಗಳ ಅಡಿಯಲ್ಲಿ ದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜಗ್ಜಿತ್ ಸಿಂಗ್, ಅಜ್ಮಲ್ ಸಿದ್ದಿಕಿ, ಬಿಷ್ಣು ಮುಂದ್ರಾ ಮತ್ತು ಇತರ ಆರೋಪಿಗಳ ವಿರುದ್ಧ ರಾಜ್ಯ ಪೊಲೀಸರು ದಾಖಲಿಸಿದ್ದ ಎಫ್‌ಐಆರ್‌ಗಳು ಮತ್ತು ಚಾರ್ಜ್‌ಶೀಟ್‌ಗಳನ್ನು ಆಧರಿಸಿ ಇ.ಡಿ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದೆ.
ಆರೋಪಿಗಳು ದುರ್ಬಲ ಮಹಿಳೆಯರಿಗೆ ಉದ್ಯೋಗ ಕೊಡಿಸುವ ಸುಳ್ಳು ಭರವಸೆಗಳನ್ನು ನೀಡಿ ಕರೆದೊಯ್ದು ಶೋಷಿಸಿದ್ದಾರೆ. ವೇಶ್ಯಾವಾಟಿಕೆಗೆ ಅವರನ್ನು ದೂಡಿ ಹಣ ಸಂಪಾದಿಸಿದ್ದಾರೆ ಎಂದು ಅಧಿಕಾರಿ ಹೇಳಿದ್ದಾರೆ.
ಈ ದಂಧೆ ಮೂಲಕ ಕೋಟ್ಯಂತರ ರೂಪಾಯಿ ಹಣವನ್ನು ನಗದು ರೂಪದಲ್ಲಿ ಸಂಪಾದಿಸಿದ ಅವರು, ಈ ಅವರ ನಿಯಂತ್ರಣದಲ್ಲಿರುವ ಬಹು ಕಂಪನಿಗಳ ಮೂಲಕ ಅಕ್ರಮ ವರ್ಗಾವಣೆ ಮಾಡಿದ್ದಾರೆ ಎಂದು ಅಧಿಕಾರಿಗಳು ಆರೋಪಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.